ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಕೇಂದ್ರ ಬಜೆಟ್ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿ, “ಈ ಬಜೆಟ್ ನಲ್ಲಿ ನಿರ್ಮಲಾ ಸೀತರಾಮನ್ ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದು ಅತ್ಯಂತ ನಿರಾಶಾದಾಯಕ ಬಜೆಟ್” ಎಂದರು.

“ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ದೇಶವನ್ನು ಒಂದಾಗಿ ನೋಡಿಲ್ಲ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿದ್ದಾರೆ. ಇದು ಕೇವಲ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ನೆರವು ನೀಡುವ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದೆ. ಇದು ಖಂಡನೀಯ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಮಂತ್ರಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ನಾನು ಬಹಳಷ್ಟು ವಿಶ್ವಾಸ ಇಟ್ಟುಕೊಂಡಿದ್ದೆ. ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿ ಜಾಗತಿಕ ಮಟ್ಟದಲ್ಲಿ ತನ್ನದೇ ಚಾಪು ಮೂಡಿಸಿದೆ. ಹೀಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಮೂಲಸೌಕರ್ಯ ನೆರವು ಹಾಗೂ ಕರ್ನಾಟಕಕ್ಕೆ ಸಹಾಯ ಮಾಡುವ ಭರವಸೆ ಇಟ್ಟುಕೊಂಡಿದ್ದೆ. ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...