ಜು.3ಕ್ಕೆ ಕೇಂದ್ರ ಮಂತ್ರಿಮಂಡಲ ಸಭೆ; ಸಂಪುಟ ಪುನಾರಚನೆ ಸಾಧ್ಯತೆ

Date:

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಜುಲೈ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಮಂತ್ರಿಮಂಡಲದ ಸಭೆ ಕರೆದಿದ್ದು, ಸಂಪುಟ ಪುನಾರಚನೆ ಆಗುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಹತ್ವದ ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯನ್ನು ಆಯೋಜಿಸುವ ನವದೆಹಲಿಯ ಪ್ರಗತಿ ಮೈದಾನದಲ್ಲಿರುವ ಕನ್ವೆಷನ್‌ ಸಭಾಂಗಣದಲ್ಲಿ ಮಂತ್ರಿ ಮಂಡಲ ಸಭೆ ನಡೆಯಲಿದೆ. ಜುಲೈ 3ನೇ ವಾರದಿಂದ ಮಳೆಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕೂ ಮೊದಲು ಕೇಂದ್ರ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.

ಚುನಾವಣೆ ದೃಷ್ಟಿಯಿಂದ ಕೆಲ ಪ್ರಮುಖ ನಾಯಕರಿಗೆ ಮಣೆಹಾಕಲು ಕೇಂದ್ರ ಮುಂದಾಗಿದೆ. ಹೀಗಾಗಿ ಯಾರಿಗೆ ಕೊಕ್, ಯಾರಿಗೆ ಸಚಿವನ ಸ್ಥಾನ ಸಿಗಲಿದೆ ಅನ್ನುವ ಚರ್ಚೆ ಕೂಡ ಪಕ್ಷದ ವಲಯದಲ್ಲಿ ಹರಿದಾಡುತ್ತಿದೆ. ಲೋಕಸಭಾ ಚುನಾವಣೆ ಜೊತೆಯಲ್ಲೇ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಘಡ ರಾಜ್ಯದ ವಿಧಾನಸಭಾ ಚುನಾವಣೆಗಳೂ ನಡೆಯಲಿದೆ. ಹೀಗಾಗಿ ಬಿಜೆಪಿ ಚುನಾವಣೆ ತಂತ್ರದ ಜೊತೆಗೆ ಸಂಪುಟ ವಿಸ್ತರಣೆಗೂ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂದಿನ ಪ್ರತಿಪಕ್ಷಗಳ ಮಹಾಸಭೆ ಬೆಂಗಳೂರಿನಲ್ಲಿ ಆಯೋಜನೆ: ಶರದ್‌ ಪವಾರ್

ಹಿಮಾಚಲ ಪ್ರದೇಶ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ, ಸಂಪುಟ ಪುನಾರಚನೆ ಮೂಲಕ ಎಚ್ಚರಿಕೆ ಹೆಜ್ಜೆಯಿಡಲು ಮುಂದಾಗಿದೆ.

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಲೋಕಸಭೆ ಚುನಾವಣೆಗೂ ಮುನ್ನ ಏಕರೂಪ ನೀತಿ ಸಂಹಿತೆ ಜಾರಿಗೊಳಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಏಕರೂಪ ನಾಗರಿಕ ಸಂಹಿತೆ ಪರ ಸುಪ್ರೀಂ ಕೋರ್ಟು ಒಲವು ತೋರಿದೆ. ಆದರೆ ಮತ ಬ್ಯಾಂಕ್‌ ರಾಜಕೀಯದ ಕಾರಣ ವಿಪಕ್ಷಗಳು ಮುಸ್ಲಿಮರ ದಾರಿ ತಪ್ಪಿಸಿ ಪ್ರಚೋದಿಸುತ್ತಿವೆ ಎಂದು ಹೇಳಿದ್ದರು.

ಮೋದಿಯವರ ಧರ್ಮ ರಾಜಕಾರಣದ ನೀತಿಯನ್ನು ಕಾಂಗ್ರೆಸ್‌ ಸೇರಿದಂತೆ ಹಲವು ವಿರೋಧ ಪಕ್ಷಗಳು ಖಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...