‘ಧರ್ಮಸ್ಥಳ’ ಅಪರಾಧ ಕೃತ್ಯಗಳ ವಿಸ್ತೃತ ತನಿಖೆ ನಡೆಸಬೇಕು: ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಗ್ರಹ

Date:

ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಶವವನ್ನು ಹೊರತೆಗೆದು ಅಲ್ಲಿನ ಕೃತ್ಯಗಳನ್ನು ಬಯಲುಗೊಳಿಸುವುದಾಗಿ ಹೇಳಿರುವ ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಬೇಕು ಎಂದು ಕರ್ನಾಟಕ ಸರ್ಕಾರವನ್ನು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಆಗ್ರಹಿಸಿದ್ದಾರೆ.

“ಧರ್ಮಸ್ಥಳದಲ್ಲಿ 1995ರಿಂದ 2014ರವರೆಗೆ ಹಲವಾರು ಅಪರಾಧ ಕೃತ್ಯಗಳು ನಡೆದಿವೆ ಎನ್ನಲಾಗಿದೆ. ಈ ರೀತಿಯಲ್ಲಿ ದೀರ್ಘಕಾಲದವರೆಗೆ ಅಪರಾಧ ಕೃತ್ಯಗಳು ನಡೆದಿದ್ದರೂ, ಈವರೆಗೆ ಯಾರಿಗೂ ಈ ಬಗ್ಗೆ ತಿಳಿಯದಿರುವುದು ನಿಜಕ್ಕೂ ಗಂಭೀರವಾದ ವಿಷಯ. ಇದು ಅಚ್ಚರಿ ತಂದಿದೆ” ಎಂದು ಅವರು ಹೇಳಿರುವುದಾಗಿ ಟೈಮ್ಸ್‌ನೌ ವರದಿ ಮಾಡಿದೆ.

“ಇದೀಗ, ಧರ್ಮಸ್ಥಳದ ಅಪರಾಧ ಕೃತ್ಯಗಳನ್ನು ಅನಾಮಧೇಯ ವ್ಯಕ್ತಿ ಬಹಿರಂಗಗೊಳಿಸಿದ್ದಾರೆ. ಮಾಹಿತಿ ನೀಡಿದವರಿಗೆ ಕರ್ನಾಟಕ ಸರ್ಕಾರ ರಕ್ಷಣೆ ನೀಡಬೇಕು. ಕೃತ್ಯಗಳ ಬಗ್ಗೆ ಸಂಪೂರ್ಣ ಮತ್ತು ವಿಸ್ತೃತ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...