ನನ್ನನ್ನು ಕೊಲ್ಲಲು ಕೇಂದ್ರ ಸಚಿವ ಭಗವಂತ ಖೂಬಾ ಸಂಚು ರೂಪಿಸಿದ್ದಾರೆ; ಪ್ರಭು ಚವ್ಹಾಣ್ ಗಂಭೀರ ಆರೋಪ

Date:

  • ‘ಕೇಂದ್ರ ಸಚಿವ ಖೂಬಾ ಬೆಂಬಲಿಗರಿಂದಲೇ ನನಗೆ ಈ ಮಾಹಿತಿ ಗೊತ್ತಾಗಿದೆ’
  • ‘ನನ್ನ ಕೊಂದು ಆರು ತಿಂಗಳಲ್ಲಿ ಉಪಚುನಾವಣೆ ನಡೆಸುವ ಷಡ್ಯಂತ್ರ’

ನನ್ನನ್ನು ಕೊಂದು ಆರು ತಿಂಗಳಲ್ಲಿ ಉಪಚುನಾವಣೆಗೂ ಷಡ್ಯಂತ್ರ ನಡೆಸುತ್ತಿದ್ದಾರೆ. ರಸ್ತೆ ಮಧ್ಯೆ ನನ್ನನ್ನು ಗುಂಡಿಕ್ಕಿ ಕೊಲೆ ಮಾಡಲು ಸಂಚು ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಖೂಬಾ ಬೆಂಬಲಿಗರಿಂದಲೇ ನನಗೆ ಗೊತ್ತಾಗಿದೆ’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ.

ಬೀದರ್‌ನ ಔರಾದ್ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಬುಧವಾರ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಣಿ ಸಭೆಯಲ್ಲಿ ಚವ್ಹಾಣ್‌ ಮಾತನಾಡಿರುವ ವಿಡಿಯೋ ಈಗ ವೈರಲ್ ಆಗಿದೆ.

“ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನೂ ಔರಾದ್ ತಾಲೂಕಿವನಾಗಿದ್ದು ಹೊಟ್ಟೆ ಪಾಡಿಗಾಗಿ ಮುಂಬೈಗೆ ಹೊಗಿದ್ದೆನೆ. ಪದೇ ಪದೆ ನಾನು ಮುಂಬೈ ಮೂಲದವನು ಎನ್ನುವುದನ್ನು ಸಚಿವ ಖೂಬಾ ಮೊದಲು ನಿಲ್ಲಿಸಲಿ. ನನ್ನಂತೆ ತಾಲೂಕಿನ ಸಾವಿರಾರು ಜನರು ಕೆಲಸಕ್ಕಾಗಿ ಹೈದರಾಬಾದ್, ಮುಂಬೈ, ಬೆಂಗಳೂರಿನಲೂ ಇದ್ದಾರೆ. ಅಂದರೆ ಅವರೆಲ್ಲ ತಾಲೂಕಿನ ನಾಗರಿಕರು ಅಲ್ವಾ? ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...