‘ಗೋ ಬ್ಯಾಕ್’ ಎಂದ ಬಿಜೆಪಿ ಕಾರ್ಯಕರ್ತರು: ಸ್ವಕ್ಷೇತ್ರದಲ್ಲೇ ಮುಜುಗರಕ್ಕೀಡಾದ ಕೇಂದ್ರ ಸಚಿವ ಗಿರಿರಾಜ್ ಸಿಂಗ್!

Date:

ಲೋಕಸಭೆ ಚುನಾವಣೆಯ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲದಿದ್ದರೂ, ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ದೇಶದ ಎಲ್ಲ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಈಗಾಗಲೇ ಕೆಲವು ಬಿಜೆಪಿ ಹಾಗೂ ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ನಡುವೆ ಆಡಳಿತಾರೂಢ ಬಿಜೆಪಿ ಮುಖಂಡರ ವಿರುದ್ಧವೇ ಪಕ್ಷದ ಕಾರ್ಯಕರ್ತರು ರೊಚ್ಚಿಗೇಳುತ್ತಿರುವ ಘಟನೆಗಳು ವರದಿಯಾಗುತ್ತಿದೆ.

ಇತ್ತೀಚೆಗೆ ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರಿಯಾಗಿ ಕೆಲಸ ಮಾಡಿಲ್ಲ ಎಂದು ಅವರ ವಿರುದ್ಧ ಪಕ್ಷದ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಿದ್ದಲ್ಲದೇ, ಅಭ್ಯರ್ಥಿ ಬದಲಾಯಿಸುವಂತೆ ಹೈಕಮಾಂಡ್‌ಗೆ ಒತ್ತಡ ಹೇರಿದ್ದರು. ಈ ನಡುವೆ ಬಿಹಾರದ ಬೇಗುಸರಾಯ್‌ನಲ್ಲೂ ಕೂಡ ಇಂಥದ್ದೇ ಬೆಳವಣಿಗೆ ಇಂದು ನಡೆದಿದ್ದು, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸ್ವಕ್ಷೇತ್ರದಲ್ಲೇ ಮುಜುಗರಕ್ಕೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಗ್ ಅವರು ಬಚ್ವಾಡಾದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ, ಬೇಗುಸರಾಯ್‌ನ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ತಮ್ಮ ಸ್ವಂತ ಲೋಕಸಭಾ ಕ್ಷೇತ್ರ ಬೇಗುಸರಾಯ್‌ನಲ್ಲಿ ಪಕ್ಷದ ಕಾರ್ಯಕರ್ತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಬಚ್ವಾಡಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಣಿ ಗ್ರಾಮದ ಬಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಒಂದು ಕೈಯ್ಯಲ್ಲಿ ಪಕ್ಷದ ಬಾವುಟ ಹಾಗೂ ಇನ್ನೊಂದು ಕೈಯ್ಯಲ್ಲಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿ, ಮುರ್ದಾಬಾದ್, ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಕೆಲಹೊತ್ತು ಕೇಂದ್ರ ಸಚಿವ ಕಾರಿನಲ್ಲೇ ಕುಳಿತುಕೊಳ್ಳಬೇಕಾಯಿತು. ಆ ನಂತರ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ  ಕಪ್ಪು ಬಾವುಟ ತೋರಿಸಿದವರನ್ನು ಸರಿಸಿ, ಮುಂದೆ ತೆರಳಲು ನೆರವಾದರು. ಈ ಬೆಳವಣಿಗೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್‌ಗೆ ಆಹಾರವಾಗಿದೆ.

ಬೇಗುಸರಾಯ್‌ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಪೆಪ್ಸಿ ಕಂಪೆನಿಯ ಹೊಸ ಸ್ಥಾವರದಲ್ಲಿ ಬೇಗುಸರಾಯ್‌ನ ಸ್ಥಳೀಯರಿಗೆ ಯಾವುದೇ ಪ್ರಾತಿನಿದ್ಯ ನೀಡಿಲ್ಲ. ಯಾರೊಬ್ಬರಿಗೂ ಉದ್ಯೋಗ ನೀಡಿಲ್ಲ. ಗಿರಿರಾಜ್ ಸಿಂಗ್ ಅವರಿಗೆ ಐದರಿಂದ ಹತ್ತು ಲಕ್ಷ ರೂಪಾಯಿ ಲಂಚ ನೀಡಿದವರಿಗೆ ಮಾತ್ರ ಉದ್ಯೋಗ ನೀಡಲಾಗಿದೆ. ಅರ್ಹರಿದ್ದವರಿಗೆ ವಂಚಿಸಲಾಗಿದೆ ಎಂದು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

“ಈವರೆಗೆ ಕ್ಷೇತ್ರದಲ್ಲಿ ಸರಿಯಾದ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಆದರೆ, ಗಿರಿರಾಜ್ ಸಿಂಗ್ ಅವರು ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಾಕಷ್ಟು ಸಕ್ರಿಯರಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗಿಟ್ಟಿಸಲು ಈಗ ಜನರ ಬಳಿಗೆ ತಲುಪುತ್ತಿದ್ದಾರೆ. ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...