ತಹಶೀಲ್ದಾರ್ ನೋಟಿಸ್​ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ಕುಮಾರಸ್ವಾಮಿ

Date:

ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ತಹಶೀಲ್ದಾರ್ ನೀಡಿದ ನೋಟಿಸ್​ ವಿರುದ್ಧ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಹೈಕೋರ್ಟ್​​ ಮೆಟ್ಟಿಲೇರಿದ್ದಾರೆ.

6 ಎಕರೆ ಒತ್ತುವರಿ ಸಂಬಂಧ ನೋಟಿಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆ ನಡೆಸಿತು.

ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್ ಮನವಿ ಮಾಡಿದರು. ಬಳಿಕ ಕೋರ್ಟ್​​, ಮಾರ್ಚ್ 27ರವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ದಾಖಲಿಸಿಕೊಂಡು ವಿಚಾರಣೆಯನ್ನು ಮಾರ್ಚ್​​ 27ಕ್ಕೆ ನಿಗದಿಪಡಿಸಿದೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕೋರ್ಟ್​​ ತಾತ್ಕಾಲಿಕ ರಿಲೀಫ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಹಾಗೂ ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. 1985ರಲ್ಲಿ ಕ್ರಯಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ. ಹಾಗೇ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ವಾದ ಮಂಡಿಸಿದರು.

ಕುಮಾರಸ್ವಾಮಿ ಪರ ವಕೀಲರ ವಾದಕ್ಕೆ ಎಎಜಿ ಕಿರಣ್ ರೋಣ್ ಆಕ್ಷೇಪ ವ್ಯಕ್ತಪಡಿಸಿದ್ದು, 2025ರ ತಿದ್ದುಪಡಿಯನ್ವಯ ತಹಶೀಲ್ದಾರ್‌ಗೆ ಅಧಿಕಾರವಿದೆ. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಕೋರ್ಟ್​ಗೆ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ಕೋರ್ಟ್​, ಮಾರ್ಚ್ 27ರವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ದಾಖಲಿಸಿ ಮಾರ್ಚ್​ 27ಕ್ಕೆ ವಿಚಾರಣೆ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...