HMT ಭೂಮಿ ವಶಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ, ಕಾನೂನು ಹೋರಾಟದ ಎಚ್ಚರಿಕೆ

Date:

ಬೆಂಗಳೂರು ನಗರದ ಜಾಲಹಳ್ಳಿಯಲ್ಲಿ ಹೆಚ್‌ಎಂ‌ಟಿ ಕಂಪನಿಗೆ ಸೇರಿದ ಐದು ಎಕರೆ ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಹೆಚ್‌ಎಂ‌ಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರ್ಕಾರಕ್ಕೆ ಹಿನ್ನೆಡೆ ಆಗುವುದು ಖಚಿತ” ಎಂದರು.

“ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ನೋಡಲಿ ಸಚಿವ ಈಶ್ವರ್ ಖಂಡ್ರೆ ಅವರು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪು ಅನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಇದನ್ನು ನೋಡಲಿ. ಎಷ್ಟು ಎಕರೆ ಲೂಟಿ ಆಗಿದೆ ಅಲ್ಲಿ ನೋಡಲಿ. ನಿನ್ನೆ ಐದು ಎಕರೆಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಹೆಚ್‌ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಣ್ಯ ಇಲಾಖೆ ಫಲಕ ಅಳವಡಿಕೆ

ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್‌ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಶುಕ್ರವಾರ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಚ್ಎಂಟಿ ವಶದಲ್ಲಿದ್ದ ಐದು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಅರಣ್ಯ ಇಲಾಖೆ

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...