ಉಡುಪಿ | ರಾ.ಹೆ. ಕಾಮಗಾರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

Date:

ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮೀನುಗಾರ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ.

ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆ ಆರಂಭವಾಗುತ್ತಿದ್ದಂತೆ ಮಾತು ಆರಂಭಿಸಿದ ಮೀನುಗಾರ ಮುಖಂಡ ಕಿಶೋರ್ ಡಿ.ಸುವರ್ಣ, “ಕೋಟ್ಯಂತರ ರೂ. ಆದಾಯ ಬರುವ ಮತ್ತು ಲಕ್ಷಾಂತರ ಮಂದಿಗೆ ಉದ್ಯೋಗ ನೀಡುವ ಕೇಂದ್ರವಾಗಿರುವ ಮಲ್ಪೆ ಬಂದರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸರ್ವೆ, ಅಗಲ, ಉದ್ದ ಮತ್ತು ಪರಿಹಾರದ ಬಗ್ಗೆ ಜನರಿಗೆ ಸಾಕಷ್ಟು ಗೊಂದಲಗಳಿವೆ. ಇದರ ವಿರುದ್ಧ ಹಲವು ಮಂದಿ ಕೋರ್ಟ್‌ಗೆ ಹೋಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿ ಪರಿಹಾರ ಕಾರ್ಯ ಕೂಡ ವೈಜ್ಞಾನಿಕ ನಡೆದಿಲ್ಲ. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ ಕೋಟ್ಯಂತ ರೂ. ಆದಾಯ ಇರುವ ಈ ರಸ್ತೆಗೆ ಸಂಬಂಧಿಸಿ ಪರಿಹಾರಕ್ಕೆ ಕೇವಲ 50 ಕೋಟಿ ರೂ. ಕೊಡಲು ಹಿಂದೇಟು ಹಾಕುವುದರಲ್ಲಿ ಅರ್ಥ ಇದೆಯೇ?” ಎಂದು ಅವರು ಸಂಸದೆ ವಿರುದ್ಧ ಕಿಡಿಕಾರಿದರು.

“ನಾವು ನಿಮ್ಮ ಮೇಲೆ ವಿಶ್ವಾಸ ಇಟ್ಟು ಮತ ಹಾಕಿ, ಗೆಲ್ಲಿಸಿದ್ದೇವೆ. ಆದರೆ ನೀವು ನಮ್ಮ ಮೇಲೆ ವಿಶ್ವಾಸ ಇಟ್ಟಿಲ್ಲ. ನಿಮಗೆ 10 ವರ್ಷಗಳಿಂದ ಮತ ಹಾಕಿದ್ದಕ್ಕೆ ನೀವು ನಮಗೆ ಏನು ಮಾಡಿದ್ದೀರಿ. ರಸ್ತೆಯಲ್ಲಿ ಭೂಮಿ ಕಳೆದುಕೊಳ್ಳುವವರನ್ನು ಸೇರಿಸಿ ಈವರೆಗೆ ಒಂದೇ ಒಂದು ಸಭೆ ಸಂಸದರಾಗಿ ನೀವು ಕರೆದಿಲ್ಲ. ನೀವು ನಮ್ಮ ಜನಪ್ರತಿನಿಧಿ ಅಲ್ಲವೇ? ನಿಮಗೆ ಕರ್ತವ್ಯ ಇಲ್ಲವೇ? ಜನರನ್ನು ಯಾಕೆ ನೀವು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ” ಎಂದು ಅವರು ಕಿಡಿಕಾರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ, “ನೀವು Too Much ಮಾತನಾಡಬೇಡಿ, ವೈಯಕ್ತಿಕ ಸಮಸ್ಯೆ ಹೇಳಬೇಡಿ” ಎಂದರು. ಇದರಿಂದ ಮತ್ತಷ್ಟು ಕೆರಳಿದ ಕಿಶೋರ್ ಅವರು,  “ನಾನು ಜನರಿಗಾಗಿರುವ ಸಮಸ್ಯೆ ಹೇಳಿದರೆ, ಅದರಲ್ಲಿ ವೈಯಕ್ತಿಕ ಏನು? ಇಲ್ಲಿ ಕುಳಿತಿರುವವರು ಎಲ್ಲರೂ ಸಾಕ್ಷಿ ಇದ್ದಾರೆ” ಎಂದರು. ಈ ನಡುವೆ ವಾಗ್ವಾದ ಜೋರಾಗಿದ್ದರಿಂದ ಮೀನುಗಾರ ಮುಖಂಡನನ್ನು ಪೊಲೀಸರು ಸಮಾಧಾನಿಸುತ್ತಿರುವುದು ಕಂಡು ಬಂತು. ಈ ಎಲ್ಲ ಬೆಳವಣಿಗೆ ಅಲ್ಲಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲಾಗಿದೆ.

ಕೇಂದ್ರ ಸಚಿವೆ ಹಾಗೂ ಮೀನುಗಾರ ಮುಖಂಡರ ನಡುವೆ ವಾಗ್ವಾದ ನಡೆಯುತ್ತಿರುವಾಗ ಉಡುಪಿಯ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಕೂಡ ಸಭೆಯಲ್ಲಿದ್ದರು. ಅವರು ಕೂಡ ಕಕ್ಕಾಬಿಕ್ಕಿಯಾಗಿ, ಸುಮ್ಮನೆ ಕುಳಿತಿದ್ದರು. ಈ ನಡುವೆ ಮೀನುಗಾರ ಮುಖಂಡ ಕಿಶೋರ್ ಅವರ ಹೆಸರೆತ್ತಿ, ಕುಳಿತಲ್ಲಿಂದಲೇ ಸಮಾಧಾನಿಸಲು ಕೂಡ ಯತ್ನಿಸಿದರು. ಮಾತಿನ ಮಧ್ಯೆ ಕೆಲವೊಂದು ತಾಂತ್ರಿಕ ಕಾರಣಗಳಿರುವುದಾಗಿಯೂ ಶಾಸಕ ಯಶ್ಪಾಲ್ ಸುವರ್ಣ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...