ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದು ಕರೆದ ಕೇಂದ್ರ ಸಚಿವ ಸುರೇಶ್ ಗೋಪಿ

Date:

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ‘ಭಾರತ ಮಾತೆ’ ಎಂದು ಬಣ್ಣಿಸಿರುವ ಕೇಂದ್ರ ಸಚಿವ ಸುರೇಶ್ ಗೋಪಿ, ಹಿರಿಯ ಮಾರ್ಕ್ಸ್‌ವಾದಿ ಇ ಕೆ ನಯನಾರ್, ಬಿಜೆಪಿ ನಾಯಕ ಕರುಣಾಕರನ್ ತನ್ನ ರಾಜಕೀಯ ಗುರು ಎಂದು ಹೇಳಿಕೊಂಡಿದ್ದಾರೆ.

ಕೇರಳದ ತ್ರಿಶೂರಿನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ ‘ಮುರಳಿ ಮಂದಿರಂ’ಗೆ ಭೇಟಿ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುರೇಶ್ ಗೋಪಿ, ದಿವಂಗತ ಕಾಂಗ್ರೆಸ್ ಮುಖ್ಯಮಂತ್ರಿ ಕೆ ಕರುಣಾಕರನ್ ಅವರನ್ನು ಧೈರ್ಯಶಾಲಿ ಆಡಳಿತಗಾರ ಎಂದು ಬಣ್ಣಿಸಿದ್ದಾರೆ.

ಕುತೂಹಲಕರ ಸಂಗತಿ ಎಂದರೆ, ಕೇರಳದ ತ್ರಿಶೂರಿನಲ್ಲಿ ಕರುಣಾಕರನ್ ಅವರ ಪುತ್ರನ ವಿರುದ್ಧವೇ ಬಿಜೆಪಿಯಿಂದ ಸುರೇಶ್ ಗೋಪಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿ ಕರುಣಾಕರನ್ ಅವರ ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಕೆ ಮುರಳೀಧರನ್ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಪ್ರಮಾಣವಚನ ಸ್ವೀಕರಿಸಿದ ಗಂಟೆಯಲ್ಲೇ ನನಗೆ ಕೇಂದ್ರ ಮಂತ್ರಿ ಸ್ಥಾನ ಬೇಡವೆಂದ ಸುರೇಶ್ ಗೋಪಿ

ಕರುಣಾಕರನ್ ಸ್ಮಾರಕಕ್ಕೆ ಭೇಟಿಗೆ ಯಾವುದೇ ರಾಜಕೀಯ ಅರ್ಥ ಸೇರಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದ ಬಿಜೆಪಿ ನಾಯಕ ಸುರೇಶ್ ಗೋಪಿ “ನಾನು ನನ್ನ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

ಹಾಗೆಯೇ ನಯನಾರ್ ಮತ್ತು ಅವರ ಪತ್ನಿ ಶಾರದಾ ಟೀಚರ್‌ನಂತೆ ತಾನು ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಜೊತೆ ನಿಕಟವಾದ ಸಂಬಂಧ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾರೆ.

ಸುರೇಶ್ ಗೋಪಿ ಜೂನ್ 12ರಂದು ಕಣ್ಣೂರಿನಲ್ಲಿರುವ ನಯನಾರ್ ಅವರ ಮನೆಗೆ ಭೇಟಿ ನೀಡಿದ್ದು ನಯನಾರ್ ಅವರ ಕುಟುಂಬಸ್ಥರೊಂದಿಗೆ ಮಾತನಾಡಿದ್ದರು.

ಇದನ್ನು ಓದಿದ್ದೀರಾ?  ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ: ಬಿಜೆಪಿ ಮಾಜಿ ಸಂಸದ, ನಟ ಸುರೇಶ್ ಗೋಪಿಗೆ ನಿರೀಕ್ಷಣಾ ಜಾಮೀನು

ಮುರಳಿ ಮಂದಿರಂಗೆ ಭೇಟಿ ನೀಡಿದ ಬಳಿಕ ಸುರೇಶ್ ಗೋಪಿ ಅವರು ನಗರದ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಸುರೇಶ್ ಗೋಪಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದಿದ್ದಾರೆ. ತ್ರಿಶೂರ್ ಲೋಕಸಭೆ ಚುನಾವಣೆಗೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐನ ಅಭ್ಯರ್ಥಿಗಳ ನಡುವೆ ಭರ್ಜರಿ ಸ್ಪರ್ಧೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...