ಸರ್ಕಾರದ ಬೆದರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

Date:

ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಿಗದಿಯಂತೆ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದೆ.

ಇಂದು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನವರೆಗೆ, ಅತಿಥಿ ಉಪನ್ಯಾಸಕರ 80 ಕಿ.ಮೀ ಪಾದಯಾತ್ರೆ ಆರಂಭವಾಗಿದೆ. ಹೊಸ ವರ್ಷದ ಆರಂಭದ ದಿನವೇ ಸರಕಾರಕ್ಕೆ ಹೊಸ ಸಮಸ್ಯೆ ಎದುರಾಗಿದೆ. ಜ.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಿ, ಅಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರು ಬೃಹತ್‌ ಸಮಾವೇಶ ನಡೆಸಲಿದ್ದಾರೆ.


ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್‌ ಪಕ್ಷ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವು ಸರ್ಕಾರಕ್ಕೆ ಕೇಳುತ್ತಿದ್ದೇವೆ. ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಅದಕ್ಕಾಗಿ ಕಳೆದ ಒಂದು 39 ದಿನಗಳಿಂದ ತರಗತಿ ಬಹಿಷ್ಕರಿಸಿ ನಾವು ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಪಾದಯಾತ್ರೆ ಮೂಲಕ ಹೋರಾಟ ತೀವ್ರಗೊಳಿಸಲು ನಾವು ತೀರ್ಮಾನಿಸಿದ್ದೇವೆ ಎಂದು ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸದನದಲ್ಲೇ ಅಂದಿನ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದರು. ಈ ಸಂಬಂಧ ವಿಡಿಯೋ ಎಲ್ಲ ಕಡೆ ವೈರಲ್‌ ಆಗಿದೆ. ಈಗ ಅಧಿಕಾರಕ್ಕೆ ಬಂದಾಗ ಅದೇ ಮಾತಿನ ಮೇಲೆ ತಮ್ಮ ಸರ್ಕಾರ ಏಕೆ ನಿಲ್ಲುವುದಿಲ್ಲ? ಜೊತೆಗೆ ಪ್ರಣಾಳಿಕೆಯಲ್ಲೂ ಈ ಬಗ್ಗೆ ಭರವಸೆ ನೀಡಿದ್ದೀರಿ. ಹಾಗಾಗಿ ನುಡಿದಂತೆ ನಡೆಯುವ ಸರ್ಕಾರ ತಮ್ಮದು ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿ ಎಂಬುದು ಅತಿಥಿ ಉಪನ್ಯಾಸಕರ ಆಗ್ರಹವಾಗಿದೆ.

ಅತಿಥಿ ಉಪನ್ಯಾಸಕರ ವೇತನ 5 ಸಾವಿರಕ್ಕೆ ಹೆಚ್ಚಿಸಿದ್ದ ರಾಜ್ಯ ಸರ್ಕಾರ

ಅತಿಥಿ ಉಪನ್ಯಾಸಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದ ಸರ್ಕಾರ, ಆ ಮಾತುಕತೆಯ ನಂತರ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ʼಅತಿಥಿ ಉಪನ್ಯಾಸಕರ ವೇತನ 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದರು.

“ಪರಿಷ್ಕೃತ ವೇತನವು ಜನವರಿ 1, 2024 ರಿಂದ ಅನ್ವಯವಾಗಲಿದೆ. ಜೊತೆಗೆ ಅತಿಥಿ ಉಪನ್ಯಾಸಕರಿಗೆ ಇನ್ಕ್ರಿಮೆಂಟ್, ವೇತನ ಸಹಿತ ರಜೆ, ಆರೋಗ್ಯ ಸವಲತ್ತು, ನಿವೃತ್ತ ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಿದ್ದೇವೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...