ಭೂ ವಿವಾದ | ಕೇಂದ್ರ ಸಚಿವ ಕೀರ್ತಿ ವರ್ಧನ್ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲು ಯುಪಿ ಕೋರ್ಟ್‌ ಆದೇಶ

Date:

ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಅವರ ಆಪ್ತ ರಾಜೇಶ್ ಸಿಂಗ್ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕೋರ್ಟ್ ಆದೇಶಿಸಿದೆ.

ಸಂಸದರ-ಶಾಸಕರ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಸಿವಿಲ್ ನ್ಯಾಯಾಧೀಶ, ಹಿರಿಯ ವಿಭಾಗ) ಅಪೇಕ್ಷಾ ಸಿಂಗ್ ಅವರು ಕೀರ್ತಿ ವರ್ಧನ್ ಸಿಂಗ್, ರಾಜೇಶ್ ಸಿಂಗ್, ಪಿಂಕು ಸಿಂಗ್, ಸಹದೇವ್ ಯಾದವ್ ಮತ್ತು ಕಾಂತಿ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಂಕಾಪುರ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ವಕ್ಫ್‌ ವಿವಾದ: ಅಂತಿಮವಾಗಿ ಗೆದ್ದಿದ್ದು ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಕಾಪುರ ಪ್ರದೇಶದ ಭಿತೌರಾ ನಿವಾಸಿ ಅಜಯ್ ಸಿಂಗ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗುತ್ತಿದೆ. ಮಾರಾಟಗಾರರಾದ ಬಿಟ್ಟನ್ ದೇವಿ ಅವರಿಗೆ ಆಮಿಷವೊಡ್ಡಿ ಅಜಯ್ ಸಿಂಗ್ ಅವರ ಪತ್ನಿ ಮನೀಷಾ ಸಿಂಗ್ ಅವರ ಹೆಸರಿನಲ್ಲಿ ನೋಂದಾಯಿಸಲಾದ ಭೂಮಿಯನ್ನು ಮಿಥಲೇಶ್ ರಸ್ತೋಗಿ ಮತ್ತು ಕಾಂತಿ ಸಿಂಗ್ ಅವರಿಗೆ ಮಾರಾಟ ಮಾಡಿರುವುದಾಗಿ ಬಿಂಬಿಸಲಾಗಿದೆ. ಇದಕ್ಕಾಗಿ ಮೂರು ವರ್ಷಗಳ ಹಳೆಯ ಸ್ಟಾಂಪ್ ಪೇಪರ್ ಬಳಸಲಾಗಿದೆ. ಆಸ್ತಿಯನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ದೂರಿದ್ದಾರೆ.

ದೂರು ನೀಡಿದಾಗ ಪೊಲೀಸ್ ವರಿಷ್ಠಾಧಿಕಾರಿ ತನಿಖೆಗೆ ಆದೇಶಿಸಿದ್ದರು. ಆರೋಪವೂ ದೃಢಪಟ್ಟಿತ್ತು. ಎಸ್‌ಪಿ ನಿರ್ದೇಶನಗಳ ಆಧಾರದ ಮೇಲೆ, 2024ರಲ್ಲಿ ಪೊಲೀಸರು ಮಾರಾಟಗಾರ ಮತ್ತು ಖರೀದಿದಾರರ ವಿರುದ್ಧ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ನಂತರ ಈ ಪ್ರಕರಣವನ್ನು ಕೈಬಿಟ್ಟು ಅಂತಿಮ ವರದಿಯನ್ನು ಸಲ್ಲಿಸಿದ್ದರು ಎಂದು ದೂರಲಾಗಿದೆ.

ಅಜಯ್ ಸಿಂಗ್ ಅವರು ಪ್ರಕರಣವನ್ನು ಕೈಬಿಡುವುದನ್ನು ವಿರೋಧಿಸಿದ್ದರು. 2025ರ ಮಾರ್ಚ್‌ನಲ್ಲಿ ನ್ಯಾಯಾಲಯವು ಅಂತಿಮ ವರದಿಯನ್ನು ಬದಿಗಿಟ್ಟು ಹೆಚ್ಚಿನ ತನಿಖೆಗೆ ಆದೇಶಿಸಿತ್ತು. ಈ ಮಧ್ಯೆ ಸಚಿವರ ಆಪ್ತ ರಾಜೇಶ್ ಸಿಂಗ್ ಅವರು 2024ರಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಜಯ್ ಸಿಂಗ್ ಮತ್ತು ಅವರ ಪತ್ನಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬ

ನ್ಯಾಯಾಲಯವು ಹೆಚ್ಚಿನ ತನಿಖೆಗೆ ಆದೇಶಿಸಿದ ನಂತರ, ರಾಜೇಶ್ ಸಿಂಗ್ ರಾಜಕೀಯ ಪ್ರಭಾವ ಬಳಸಿ ದಂಪತಿಗೆ ಕಿರುಕುಳ ನೀಡಿದ್ದಾರೆ. ತನ್ನ ಚಾಲಕ ರಿಂಕು ಸಿಂಗ್ ಮೂಲಕ ದಂಪತಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆಂದು ಹೇಳಲಾಗಿದೆ. ಹಾಗೆಯೇ ಪ್ರಕರಣ ಕೈಬಿಡಲು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...