‘ಜವಾನ್’ ಸಿನಿಮಾಕ್ಕಾಗಿ ಶಾರೂಕ್‌ ಖಾನ್‌ಗೆ ಪತ್ರದ ಮೂಲಕ ‘ಥ್ಯಾಂಕ್ಯೂ’ ಎಂದ ಡಾ. ಕಫೀಲ್ ಖಾನ್

Date:

2017ರ ಗೋರಖ್‌ಪುರ ಆಸ್ಪತ್ರೆಯಲ್ಲಿ 63 ಮಕ್ಕಳ ಸಾವಿನ ಪ್ರಕರಣದಲ್ಲಿ ಬಲಿಪಶುವಾಗಿದ್ದ ಡಾ ಕಫೀಲ್ ಖಾನ್, ನಟ ಶಾರುಖ್ ಖಾನ್ ಅವರ ಇತ್ತೀಚಿನ ಹಿಟ್ ಸಿನಿಮಾವಾಗಿರುವ ‘ಜವಾನ್‌’ನಲ್ಲಿ ಅದೇ ರೀತಿಯ ಘಟನೆಯನ್ನು ಚಿತ್ರಿಸಿದ್ದಕ್ಕಾಗಿ ಪತ್ರ ಬರೆಯುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ಸನ್ಯಾ ಮಲ್ಹೋತ್ರಾ ಮಾಡಿರುವ ಪಾತ್ರ ಡಾ. ಖಾನ್‌ ಅನುಭವಿಸಿರುವ ಅನುಭವದಂತಿದೆ. ಅವರು ಆರಂಭದಲ್ಲಿ ಹೀರೋ ಎಂದು ಪ್ರಶಂಸಿಸಲ್ಪಟ್ಟಿರುತ್ತಾರೆ. ಆದರೆ ದುರಂತದಲ್ಲಿ ಅವರ ಪಾತ್ರಕ್ಕಾಗಿ ನಂತರ ಬಂಧಿಸಿ, ಜೈಲಿಗೆ ಹಾಕುವ ದೃಶ್ಯವು ‘ಜವಾನ್’ ಚಿತ್ರದಲ್ಲಿದೆ.

ಹೀಗಾಗಿ, ಸಿನಿಮಾ ನೋಡಿದ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೆ ಪತ್ರ ಬರೆದಿರುವ ಡಾ. ಕಫೀಲ್ ಖಾನ್, “ಜವಾನ್ ಸಿನಿಮಾ ಒಂದು ಕಾಲ್ಪನಿಕ ಘಟನೆಯನ್ನು ಉಲ್ಲೇಖಿಸಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಗೋರಖ್‌ಪುರ ದುರಂತಕ್ಕೆ ಅದು ಹೋಲಿಕೆಯಾಗಲಿದ್ದು, ವ್ಯವಸ್ಥಿತ ವೈಫಲ್ಯಗಳು, ನಿರಾಸಕ್ತಿ ಮತ್ತು ಮುಖ್ಯವಾಗಿ, ಕಳೆದುಹೋದ ಮುಗ್ಧ ಜೀವಗಳ ಪ್ರಬಲ ಜ್ಞಾಪನೆಯಾಗಿದೆ. ನಮ್ಮ ಆರೋಗ್ಯ ವ್ಯವಸ್ಥೆಯಲ್ಲಿ ಹೊಣೆಗಾರಿಕೆಯ ತುರ್ತು ಅಗತ್ಯವನ್ನು ಆ ದೃಶ್ಯಗಳು ಒತ್ತಿ ಹೇಳುತ್ತದೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸನ್ಯಾ ಮಲ್ಹೋತ್ರಾ ಮಾಡಿರುವ ಪಾತ್ರ ನನ್ನನ್ನು ನೇರವಾಗಿ ಉಲ್ಲೇಖಿಸದಿದ್ದರೂ, ನಾನು ಎದುರಿಸಿದ ಅನುಭವಗಳನ್ನು ಒಳಗೊಂಡಿದೆ. ಸಿನಿಮಾದಲ್ಲಿ ತೋರಿಸಿರುವ ಆಸ್ಪತ್ರೆ ದುರಂತದ ನಿಜವಾದ ಅಪರಾಧಿ ಸಿಕ್ಕಿಬೀಳುವ ದೃಶ್ಯ ನೋಡುವಾಗ ಖುಷಿಯಾಗುತ್ತದೆ. ಆದರೆ ನಿಜ ಜೀವನದಲ್ಲಿ ನಡೆದ ಗೋರಖ್‌ಪುರ ಘಟನೆಯ ನಿಜವಾದ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ನಾನು ಇನ್ನೂ ಕೂಡ ನನ್ನ ವೃತ್ತಿಯನ್ನು ಮರಳಿ ಪಡೆಯಲು ಹೆಣಗಾಡುತ್ತಿದ್ದೇನೆ. ಜೊತೆಗೆ, ತಮ್ಮ ಮಕ್ಕಳನ್ನು ಕಳೆದುಕೊಂಡ 63 ಪೋಷಕರು ಇನ್ನೂ ಕೂಡ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ” ಎಂದು ಶಾರೂಖ್‌ ಖಾನ್‌ಗೆ ಪತ್ರದಲ್ಲಿ ಹೇಳಿದ್ದಾರೆ.

2017ರ ಆಗಸ್ಟ್‌ನಲ್ಲಿ ನಡೆದಿದ್ದ ಗೋರಖ್‌ಪುರ ದುರಂತವು ರಾಷ್ಟ್ರವ್ಯಾಪಿ ಗಮನ ಸೆಳೆದಿತ್ತು. ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದ ಗೋರಖ್‌ಪುರದ ಸರ್ಕಾರಿ ಬಿಆರ್‌ಡಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 63 ಮಕ್ಕಳು ಸಾವನ್ನಪ್ಪಿದರು. ಆಕ್ಸಿಜನ್ ಪೂರೈಕೆದಾರರಿಗೆ ಬಾಕಿ ಪಾವತಿಸದೆ ಪೂರೈಕೆ ಸ್ಥಗಿತಗೊಂಡಿತ್ತು ಎಂದು ಆಸ್ಪತ್ರೆಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು ಎಂದು ವರದಿಯಾಗಿತ್ತು.

ಜೀವ ಉಳಿಸುವ ಪ್ರಯತ್ನದಲ್ಲಿ ಆಮ್ಲಜನಕ ಸಿಲಿಂಡರ್‌ಗಳನ್ನು ವ್ಯವಸ್ಥೆ ಮಾಡಲು ಡಾ. ಕಫೀಲ್ ಖಾನ್ ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿದ್ದರು. ಅವರ ಧೀರ ಪ್ರಯತ್ನಗಳು ದೇಶಾದ್ಯಂತ ಪ್ರಶಂಸಿಸಲ್ಪಟ್ಟಾಗ, ಯೋಗಿ ಸರ್ಕಾರವು ಅವರನ್ನೇ ಕರ್ತವ್ಯ ಲೋಪದ ಆರೋಪದ ಮೇಲೆ ಅವರನ್ನು ನೋಡಲ್ ಅಧಿಕಾರಿ ಹುದ್ದೆಯಿಂದ ಕಿತ್ತುಹಾಕಿತ್ತು. ಬಳಿಕ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಲಾಗಿತ್ತು. ಆದರೆ ಆ ಬಳಿಕ 2019ರಲ್ಲಿ ಅವರನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯವು ಬಿಡುಗಡೆಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...