ಶಾಸನ ಸಭೆಯ ಗೌರವ ಕಾಪಾಡಿ: ಸ್ಪೀಕರ್ ಖಾದರ್‌ಗೆ ಉಪ ರಾಷ್ಟ್ರಪತಿ ಸಲಹೆ‌

Date:

  • ಉಪ ರಾಷ್ಟ್ರಪತಿ ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದ ಖಾದರ್
  • ದೆಹಲಿ ಪ್ರವಾಸದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿ ಹಿಡಿಯುವ ಕಾರ್ಯ ಮಾಡಿ ಎಂದು ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್‌ ಯು ಟಿ ಖಾದರ್‌ ಅವರಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಲಹೆ ನೀಡಿದರು.

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ. ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಉಪರಾಷ್ಟ್ರಪತಿಗಳು, ಖಾದರ್ ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ?:ಸಂಘಪರಿವಾರದ ಹೇಡಿಗಳಿಗೆ ಪಠ್ಯದಲ್ಲಿ ಜಾಗವಿಲ್ಲ: ಬಿಕೆ ಹರಿಪ್ರಸಾದ್

ಸಭಾಧ್ಯಕ್ಷರಾಗಿ ಕಾರ್ಯ ಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದ ಅವರು, ಕರ್ನಾಟಕ ರಾಜ್ಯದ ಜನರ  ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...