‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

Date:

‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ನುಸುಳಿದ್ದಾರೆ ಮತ್ತು ಅವರು ಸರ್ಕಾರದ ವಿರುದ್ಧ ಸಕ್ರಿಯವಾಗಿ ಸುಳ್ಳು ಹರಡುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆ ನೀಡಿದ ಒಂದು ವಾರದ ನಂತರ ಪುಣೆ ಮೂಲದ ಸಂಘಟನೆಯೊಂದು ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದೆ.

ಈ ರೀತಿ ಇರುವ ಎನ್‌ಜಿಒಗಳ ಹೆಸರನ್ನು ಶಿಂಧೆ ಬಹಿರಂಗಪಡಿಸಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಜೂನ್ 16ರಂದು ವಿಧಾನ ಪರಿಷತ್ತಿನ ಚುನಾವಣೆಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಂದೆ, “ನಕ್ಸಲರು ಗಡ್ಚಿರೋಲಿಯಲ್ಲಿ (ಮಹಾರಾಷ್ಟ್ರದ ಒಂದು ನಗರ) ಮಾತ್ರವಲ್ಲ, ನಗರ ನಕ್ಸಲರು ಎನ್‌ಜಿಒಗಳಿಗೆ ಪ್ರವೇಶಿಸಿದ್ದಾರೆ. ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಸುಳ್ಳು ನಿರೂಪಣೆಗಳನ್ನು ಸೃಷ್ಟಿಸಿದ್ದಾರೆ” ಎಂದು ಶಿಂದೆ ದೂರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾ ಎನ್‌ಜಿಒಗಳು ಅಲ್ಲ ಆದರೆ ಕೆಲವು ಎನ್‌ಜಿಒಗಳು ಆಡಳಿತ ವಿರೋಧಿಯಾಗಿದೆ. ಆ ಎನ್‌ಜಿಒಗಳು ನಮ್ಮ ಮೈತ್ರಿ ಸರ್ಕಾರದ ಬಗ್ಗೆ ಸಕ್ರಿಯವಾಗಿ ಸುಳ್ಳುಗಳನ್ನು ಹರಡುತ್ತಾರೆ” ಎಂದು ಶಿಂದೆ ಆರೋಪಿಸಿದ್ದರು.

ಇದನ್ನು ಓದಿದ್ದೀರಾ?  ‘ನಗರ ನಕ್ಸಲ್’ ದಂಪತಿಗಳ ದುರಂತಗಾಥೆ ಮತ್ತು ಫ್ರಾಕ್ಚರ್‍ಡ್ ಫ್ರೀಡಂ

‘ನಿರ್ಭಯ್ ಬನೊ’ (ನಿರ್ಭಯವಾಗು) ಜನಾಂದೋಲನದ ಸಕ್ರಿಯ ಸದಸ್ಯ ಎಂದು ಹೇಳಿಕೊಳ್ಳುವ ಬಾಲಕೃಷ್ಣ ಅಲಿಯಾಸ್ ಬಂಟಿ ನಿಧಾಲ್ಕರ್ ಕಳುಹಿಸಿರುವ ನೋಟಿಸ್‌ನಲ್ಲಿ, ” ಮಹಾರಾಷ್ಟ್ರ ಜನರು ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಮುಖ್ಯಮಂತ್ರಿಯಾಗಿರುವ ಶಿಂದೆ ಅವರು ಪ್ರತಿಯೊಂದು ವಿಷಯಕ್ಕೂ ರಾಜಕೀಯವನ್ನು ಎಳೆದು ತರುವುದು ಅನುಚಿತವಾಗಿದೆ” ಎಂದು ಹೇಳಲಾಗಿದೆ.

ನೋಟಿಸ್‌ನಲ್ಲಿ ಕೃಷಿ ಬಿಕ್ಕಟ್ಟು ಮತ್ತು ಇತರ ಸಮಸ್ಯೆಗಳ ನಡುವೆ ಹೆಚ್ಚುತ್ತಿರುವ ನಿರುದ್ಯೋಗದ ಪ್ರಸ್ತಾಪ ಮಾಡಲಾಗಿದ್ದು, ಇಂತಹ ಸಮಸ್ಯೆಗಳು ಇರುವಾಗ ಶಿಂದೆ ಆರೋಪ ಅಸಂಬದ್ಧ ಮತ್ತು ಕಾನೂನುಬಾಹಿರ. ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡಬಾರದಿತ್ತು ಎಂದು ಅಭಿಪ್ರಾಯಿಸಲಾಗಿದೆ.

ವಕೀಲ ಅಸೀಮ್ ಸರೋದೆ ಮೂಲಕ ಕಳುಹಿಸಲಾದ ನೋಟಿಸ್‌ನಲ್ಲಿ, “ಶಿವಸೇನೆ ನಾಯಕರು ನೀಡಿದ ಈ ಹೇಳಿಕೆಯು ನಗರ ನಕ್ಸಲರಾದ ವಿವಿಧ ಎನ್‌ಜಿಒಗಳ ಬಗ್ಗೆ ಅವರಿಗೆ ತಿಳಿದಿದೆ ಎಂದು ಸೂಚಿಸುತ್ತದೆ. ಆದ್ದರಿಂದ ಈ ಎಲ್ಲಾ ಎನ್‌ಜಿಒಗಳ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಕಾನೂನು ಕ್ರಮ ಜರುಗಿಸಬೇಕು, ಸಾರ್ವಜನಿಕ ಪ್ರಕಟಣೆ ನೀಡಬೇಕು” ಎಂದು ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...