ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

Date:

  • ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು
  • ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ

ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.

ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಇಂದು ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾತಿ ವ್ಯವಸ್ಥೆಯ ಸಮಾಜದಲ್ಲಿ ವಾಸ್ತವಿಕ ಅಂಶಗಳನ್ನು ಅರ್ಥಮಾಡಿಕೊಂಡು ಅದರಂತೆ ನಡೆಯಬೇಕಾದದ್ದು ನಮ್ಮ ಕರ್ತವ್ಯ. ಈ ದೃಷ್ಟಿಯಿಂದ ಇಂಥ ಸಂಘಟನೆ, ಸಮಾವೇಶಗಳು ಅತ್ಯಂತ ಅವಶ್ಯಕ. ಅಧಿಕಾರ ವಿಕೇಂದ್ರೀಕರಣವಾಗಿ, ಗ್ರಾಮ ಸ್ವರಾಜ್ಯವಾಗಬೇಕು ಎಂದು ಗಾಂಧಿಜೀ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ

“ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಯಾವುದೇ ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ. ನಿಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದಾಗ ಆ ಸಮುದಾಯ ಹಿಂದುಳಿಯುತ್ತದೆ. ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರ ತಂಡ ಮುಂದಿನ ವಾರ ಆಗಮನ: ಸಚಿವ ಚಲುವರಾಯಸ್ವಾಮಿ

ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ

“ಎಲ್ಲ ಜಾತಿಯವರನ್ನೂ ಒಳಗೊಂಡು ಸರ್ಕಾರವನ್ನು ನಡೆಸುವಂತಹ ಶಕ್ತಿ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನೇಕ ರಾಜ್ಯಗಳಲ್ಲಿ ಕುರುಬ ಸಮುದಾಯದವರು ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಲ್ಲಿಯೂ ಇದ್ದಾರೆ. ಗುಲ್ಬರ್ಗ, ಬೀದರ್, ಯಾದಗಿರಿಯಲ್ಲಿ ಗೊಂಡ, ರಾಜಗೊಂಡ ಕುರುಬ ಸಮುದಾಯದವರು ಎಸ್‌ಟಿಗೆ ಸೇರಿದರೆ, ಕೊಡಗು ಜಿಲ್ಲೆಯಲ್ಲಿ ಎಲ್ಲ ಕುರುಬರು ಎಸ್‌ಟಿಗೆ ಸೇರಿದ್ದಾರೆ. ಗುಲ್ಬರ್ಗ, ಬೀದರ್, ಯಾದಗಿರಿಯಲ್ಲಿ ಕುರುಬರು ಮತ್ತು ಗೊಂಡ ಸಮುದಾಯದವರು ಒಂದೇ ಆಗಿದ್ದು, ಈ ಸಮುದಾಯಗಳನ್ನು ಎಸ್‌ಟಿಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗ ಈ ವಿಚಾರವು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಗೊಲ್ಲರು, ಕುರುಬರು, ಕೋಳಿ ಸಮಾಜವು ಸೇರಿದಂತೆ ವಿವಿಧ ಸಮಾಜಗಳನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ” ಮುಖ್ಯಮಂತ್ರಿಗಳು ತಿಳಿಸಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...