ಉತ್ತರ ಕನ್ನಡ | ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಭೇಟಿ; ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

Date:

ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ ಎಂದು ಹೇಳಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಕೂಡ ನಡೆಯುತ್ತಿದೆ. ಭಾನುವಾರ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು, ಚಾಲಕನ ಪತ್ತೆಗೆ ಆಧುನಿಕ ತಂತ್ರಜ್ಞಾನ ಬಳಸುವಂತೆ ಸೂಚನೆ ನೀಡಿದ್ದಾರೆ.

ಎಸ್‌ಡಿಆರ್‌ಎಫ್‌ ಮತ್ತು ಎನ್‌ಡಿಆರ್‌ಫ್‌ ಸಿಬ್ಬಂದಿ ಜೊತೆ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕಾರ್ಯಾಚರಣೆಗೆ ಲಭ್ಯವಿರುವ ಎಲ್ಲ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಬೇಕು. ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಬೇಕು” ಎಂದು ಸೂಚನೆ ನೀಡಿದ್ದಾರೆ.

“ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯಬೇಕು” ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರುವ ಸಾಧ್ಯತೆ ಇದೆ. ಅವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ” ಎಂದು ಸಿದ್ದರಾಮಯ್ಯ ಅವರಿಗೆ ನಾಲ್ಕು ದಿನಗಳಿಂದ ಶಿರೂರಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ವಿವರಿಸಿದ್ದಾರೆ.

ಈ ವೇಳೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ಜುಲೈ 16ರಂದು ಶಿರೂರು ಬಳಿಯ ಹೆದ್ದಾರಿಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಪಕ್ಕದಲ್ಲಿ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, ಹಲವಾರು ವಾಹನಗಳು ಗಂಗಾವಳಿ ನದಿಗೆ ಬಿದ್ದಿದ್ದವು. ಕಳೆದ ಆರು ದಿನಗಳಿಂದ ಗುಡ್ಡ ಕುಸಿದ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...