ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್, ಬಿಜೆಪಿಯ ಅಚ್ಚರಿಯ ಅಭ್ಯರ್ಥಿ ಯಾರು?

Date:

ಉತ್ತರ ಕನ್ನಡ ಕ್ಷೇತ್ರ ಈ ಬಾರಿ ಎರಡು ಪಕ್ಷಗಳು ಅಚ್ಚರಿಯ ಅಭ್ಯರ್ಥಿಗಳು ಕಣಕ್ಕಿಸಲು ಮುಂದಾಗಿದೆ. ಕಳೆದ ಬಾರಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಯಾದ್ದು ಜೆಡಿಎಸ್ ಅಭ್ಯರ್ಥಿಯಾಗಿ ಆನಂದ ಅಸ್ನೋಟಿಕರ್ ಕಣದಲ್ಲಿದ್ದರು. ಈ ಬಾರಿ ಬಿಜೆಪಿ – ಜೆಡಿಎಸ್ ಮೈತ್ರಿಯಾಗಿದೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಆರು ಬಾರಿ ಸಂಸದರಾಗಿದ್ದು ಈ ಬಾರಿ ಕ್ಷೇತ್ರದಲ್ಲಿ ಬಾರಿ ವಿರೋಧವಿರುವ ಕಾರಣ ಕಣಕ್ಕೆ ಇಳಿಸುವುದು ಬಹುತೇಕ ಅನುಮಾನ. ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸುತ್ತದೆ ಎಂಬ ಮಾತಿದೆ.

ಕಾಂಗ್ರೆಸ್ ನಿಂದ ಅಂಜಲಿ ನಿಂಬಾಳ್ಕರ್

ಮಾರ್ಗರೇಟ್ ಆಳ್ವಾ ನಂತರ ಮತ್ತೆ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದೆ.ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಪಕ್ಷ ಟಿಕೆಟ್‌ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಇಲ್ಲಿ ಸತತ ನಾಲ್ಕು ಬಾರಿ ಜಯಗಳಿಸಿದ್ದು, ಬಿಜೆಪಿಯ ಓಟ ತಡೆಯಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಸುವುದೆ ಸೂಕ್ತವೆಂದು ಕಾಂಗ್ರೆಸ್ ಅಭಿಪ್ರಾಯ. 8.07 ಲಕ್ಷದಷ್ಟು ಮಹಿಳಾ ಮತದಾರರಿರುವ ಈ ಕ್ಷೇತ್ರದಲ್ಲಿದ್ದಾರೆ. ಅಂಜಲಿ ನಿಂಬಾಳ್ಕರ್ ಅವರು ಮರಾಠಾ ಸಮುದಾಯಕ್ಕೆ ಸೇರಿದ್ದಾರೆ. ಖಾನಾಪುರ, ಕಿತ್ತೂರು, ಹಳಿಯಾಳ ಕ್ಷೇತ್ರದಲ್ಲಿನ ಮರಾಠಾ ಸಮುದಾಯದ ಮತಗಳು ಹೆಚ್ಚಿವೆ. ಹಾಗೆ ಕ್ಷೇತ್ರದಲ್ಲಿ 2.02 ಲಕ್ಷ ಮರಾಠಾ ಮತಗಳಿದ್ದು ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರವಹಿಸಲಿವೆ.

ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ?

ಹಾಲಿ ಸಂಸದ ಅನಂತಕುಮಾರ್ ಹೆಗಡೆ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು ಕಳೆದ ಐದು ವರ್ಷಗಳಿಂದ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ, ತನ್ನ ಪಕ್ಷದ ಕಾರ್ಯಕರ್ತರಿಗೂ ಸಿಗುತ್ತಿಲ್ಲವೆಂದು ಸ್ವಪಕ್ಷದಿಂದಲ್ಲೆ ಈ ಬಾರಿ ಹಾಲಿ ಸಂಸದರ ಸ್ವರ್ಧೆಗೆ ವಿರೋಧ ಅಲೆ ಜೋರಾಗಿದೆ. ಕಳೆದ ಮೂರು ತಿಂಗಳಿಂದ ಏಕಾಏಕಿ ಕ್ಷೇತ್ರದಲ್ಲಿ ಕಾಣಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದು ಕ್ಷೇತ್ರದ ಕಾರ್ಯಕರ್ತರಿಗೇ ಬೇಸರ ತರಿಸಿದೆ. ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿರುವ ಕಾರಣದಿಂದ ಟಿಕೆಟ್ ಮಿಸ್ ಆಗುವುದು ಪಕ್ಕ ಎನ್ನಲಾಗುತ್ತಿದೆ.

ಒಂದು ವೇಳೆ ಅನಂತಕುಮಾರ್ ಹೆಗಡೆ ಕಣಕ್ಕಿಸದಿದ್ದರೆ, ವಿಧಾನಸಭಾ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಹರಿಪ್ರಕಾಶ್ ಕೋಣೆಮನೆ ಮತ್ತು ಚಕ್ರವರ್ತಿ ಸುಲಿಬೆಲೆ ಹೆಸರು ಕ್ಷೇತ್ರದಲ್ಲಿ ಕೇಳಿಬರುತ್ತಿದೆ. ಕೊನೆಯ ಕ್ಷಣದಲ್ಲಿ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಶಿರಸಿ ಕ್ಷೇತ್ರದಿಂದ ಸೋಲು ಕಂಡ ಕಾಗೇರಿ ಲೋಕಸಭೆ ಪ್ರವೇಶ ಮಾಡಲು ಕ್ಷೇತ್ರದಲ್ಲಿ ಓಡಾಟ ಮಾಡುತ್ತಿದ್ದಾರೆ. ಟಿಕೆಟ್ ಸಿಗುವ ಭರವಸೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ಈ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಮಣೆ ಹಾಕುತ್ತೆ ಎಂಬ ಮಾತು ಇದೆ.

ಹರಿಪ್ರಕಾಶ್ ಕೋಣೆಮನೆ ಸಹಾ ಈಗಾಗಲೇ ಕಾರ್ಯಕರ್ತರನ್ನು ಭೇಟಿಮಾಡುವ ಕೆಲಸ ಶುರುಮಾಡಿದ್ದಾರೆ. ಟಿಕೆಟ್ ನೀಡುವುದಾದರೆ ಕಣಕ್ಕಿಳಿಯುತ್ತೇನೆ ಎಂದಿದ್ದಾರೆ. ಇತ್ತ ಚಕ್ರವರ್ತಿ ಸೂಲಿಬೆಲೆ ರಾಜಕೀಯ ಆಸಕ್ತಿ ಇಲ್ಲ ಎನುತ್ತಲೇ ಅವಕಾಶ ಬಂದರೆ ಸ್ವರ್ಧೆ ಮಾಡುತ್ತೇನೆ ಎಂದಿದ್ದಾರೆ.

ಒಟ್ಟಾರೆಯಾಗಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಹಲವು ಕಾರಣಗಳಿಂದ ಈ ಬಾರಿಯ ಚುನಾವಣೆ ಜೋರಾಗಿ ನಡೆಯಲಿದೆ. ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್ ಕಣಕ್ಕಿಳಿದ ಕಾರಣ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿಗೆ ಟಿಕಿಟ್ ಸಿಗಬಹುದು. ಇಂದು ಸಂಜೆ ಅಥವಾ ನಾಳೆ ಟಿಕೆಟ್‌ ಘೋಷಣೆಯಾಗುವ ಸಾಧ್ಯತೆಯಿದೆ.

WhatsApp Image 2025 11 17 at 5.24.20 PM
ಸಂತೋಷ್‌ ಎಚ್‌ ಎಂ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...