ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕ ತನಿಖೆ ಆರಂಭ

Date:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪ್ರತ್ಯೇಕ ತನಿಖೆಯನ್ನು ಕೈಗೊಂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಆರಂಭಿಸಿ ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರುವ ಆರೋಪಿಗಳ ವಿಚಾರಣೆಯನ್ನು ಇಡಿ ಅಧಿಕಾರಿಗಳು
ನಡೆಸಿದ್ದಾರೆ.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರಶುರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ, ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

9 ಆರೋಪಿಗಳ ಸೆರೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಏನಿದು ಪ್ರಕರಣ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆ ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ.

ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆ ಕೈಗೊಂಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...