ವಾಲ್ಮೀಕಿ ನಿಗಮ ಅಕ್ರಮ | ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ, 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ

Date:

ವಾಲ್ಮೀಕಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮನನ್ನು ಹೈದರಾಬದ್​ನಲ್ಲಿ ಎಸ್ಐಟಿ ಬಂಧಿಸಿದೆ.

ಬಂಧಿತ ಆರೋಪಿ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದು, ಎಲ್ಲ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿದೆ.

ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದನ್ನು ಬೆನ್ನಟ್ಟಿ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್​ಐಟಿ ಆರೋಪಿ ಪತ್ತೆಗೆ ಬಲೆ ಬೀಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ

ಬಂಧಿತ ಆರೋಪಿ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದನ್ನು ಎಸ್‌ಐಟಿ ಜಪ್ತಿ ಮಾಡಿದೆ. ಬುಧವಾರ ಸತ್ಯನಾರಾಯಣನನ್ನು ಎಸ್​ಐಟಿ ತಂಡ ಬೆಂಗಳೂರಿಗೆ ಕರೆತರಲಿದ್ದಾರೆ.

ಏನಿದು ಪ್ರಕರಣ?

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆಯಿಂದ ಇದೆಲ್ಲ ಬೆಳಕಿಗೆ ಬಂದಿದೆ.

ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್‌ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...