ವಾಲ್ಮೀಕಿ ನಿಗಮ ಅಕ್ರಮ | ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಅವರು, “ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದರು.

ನಾವು ಕಾನೂನು ಪಾಲಕರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ, “ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ” ಎಂದು ಹೇಳಿದರು.

“ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ” ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...