ಸಂಪುಟದಿಂದ ಬಿ ನಾಗೇಂದ್ರರನ್ನು ಕಿತ್ತೊಗೆದು ಸರ್ಕಾರ ಮರ್ಯಾದೆ ಉಳಿಸಿಕೊಳ್ಳಲಿ: ಆರ್‌ ಅಶೋಕ್

Date:

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಹಾಗೂ 185 ಕೋಟಿ ಅವ್ಯವಹಾರ ಪ್ರಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿರುವುದು ಅತ್ಯಂತ ಸ್ಪಷ್ಟವಾಗಿದ್ದರೂ ಸಚಿವ ಬಿ ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡಲು ಹೊರಟಿದೆ ಈ ಲಜ್ಜೆಗೆಟ್ಟ ಕಾಂಗ್ರೆಸ್‌ ಸರ್ಕಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಸಿಎಂ ಸಿದ್ದರಾಮಯ್ಯ ನವರೇ, ಈ ಹಗರಣದಲ್ಲಿ ದಲಿತರ ದುಡ್ಡು ಲೂಟಿಯಾಗಿರುವುದು ಒಂದು ಕಡೆಯಾದರೆ, ಒಬ್ಬ ಅಮಾಯಕ ಹಾಗೂ ಪ್ರಾಮಾಣಿಕ ಅಧಿಕಾರಿಯ ಬಲಿಯಾಗಿದೆ” ಎಂದಿದ್ದಾರೆ.

“ಹತ್ತಾರು ಕಂಪನಿಗಳಿಗೆ ನೂರಾರು ಕೋಟಿ ಮೌಲ್ಯದ ಅಂತರರಾಜ್ಯ ಹಣ ವರ್ಗಾವಣೆ ನಡೆದರುವ ಈ ಪ್ರಕರಣದ ನ್ಯಾಯಯುತ ಇತ್ಯರ್ಥಕ್ಕೆ ಸಿಬಿಐ ತನಿಖೆಯೊಂದೇ ಮಾರ್ಗ. ಹಗರಣ ಇಷ್ಟು ಗಂಭೀರವಾಗಿದ್ದರೂ ಸಿಐಡಿ ತನಿಖೆ, ಎಸ್ಐಟಿ ತನಿಖೆ ಅಂತ ಕಾಲಹರಣ ಮಾಡಿ, ಕೊನೆಗೆ ಪ್ರಕರಣವನ್ನ ಮುಚ್ಚಿ ಹಾಕುವ ನಿಮ್ಮ ಹುನ್ನಾರವನ್ನ ಅರಿಯದಷ್ಟು ಅಮಾಯಕರಲ್ಲ ಕರ್ನಾಟಕದ ಜನತೆ”‌ ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ನಾಟಕವನ್ನು ಸಾಕು ಮಾಡಿ ಈ ಕೂಡಲೇ ಈ ಪ್ರಕರಣವನ್ನ ಸಿಬಿಐಗೆ ವಹಿಸಿ. ಮೃತ ಅಧಿಕಾರಿಯ ಕುಟುಂಬಕ್ಕೆ, ಪರಿಶಿಷ್ಟ ಪಂಗಡ ಸುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ. ಭ್ರಷ್ಟ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟದಿಂದ ಕಿತ್ತೊಗೆದು ನಿಮ್ಮ ಸರ್ಕಾರದ ಮರ್ಯಾದೆ ಉಳಿಸಿಕೊಳ್ಳಿ” ಎಂದು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...