ವಾಲ್ಮೀಕಿ ನಿಗಮ | ಅಕ್ರಮ ಆಗಿದೆ, ಆರೋಪಿಗಳ ವಿರುದ್ಧ ಕ್ರಮ ಆಗುತ್ತೆ: ಸಿದ್ದರಾಮಯ್ಯ

Date:

ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, “ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ” ಎಂದರು.

“ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ಯೂನಿಯನ್‌ ಬ್ಯಾಂಕ್‌ ಅಫ್‌ ಇಂಡಿಯಾದ ಅಧಿಕಾರಿ ಮಹೇಶ್‌ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್‌ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದ್ದ ಸುಮಾರು ರೂ. 46 ಕೋಟಿ ಸ್ಥಗಿತಗೊಳಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ವಿರೊಧ ಪಕ್ಷಗಳ ಸದಸ್ಯರು ನಿಯಮ 69ರ ಅಡಿಯಲ್ಲಿ 7ತಾಸಿಗೂ ಅಧಿಕ ಕಾಲ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೆ ಅಭಿಪ್ರಾಯ ವ್ಯಕ್ತಪಡಿಸಲು ಇರುವ ಅವಕಾಶದಷ್ಟೇ, ಸರ್ಕಾರಕ್ಕೂ ತನ್ನ ನಿಲುವು ವ್ಯಕ್ತಪಡಿಸಲು ಹಕ್ಕಿದೆ” ಎಂದು ಹೇಳಿದರು.

“ವಾಲ್ಮಿಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣವನ್ನು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಎಂಜಿ ರಸ್ತೆ ಖಾತೆಗೆ ವರ್ಗಾಯಿಸಿ ಅಲ್ಲಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕ್‌ ಆಗಿದ್ದು, ಕೇಂದ್ರ ಹಣಕಾಸು ಇಲಾಖೆ ಅಧೀನಕ್ಕೆ ಬರುತ್ತದೆ. ಬ್ಯಾಂಕ್‌ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಕುರಿತು ಆತ್ಮಹತ್ಯೆ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪರಿಶಿಷ್ಟ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ” ಎಂದರು.

“ಬಿಜೆಪಿ ಆಡಳಿತ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಹಗರಣವಾದಾಗ ಅವರ ಪಕ್ಷದವರೇ ಆದ ಗೂಳಿಹಟ್ಟಿ ಶೇಖರ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಆಗ ಯಾರು ರಾಜೀನಾಮೆ ನೀಡಿದ್ದರು? ಎಪಿಎಂಸಿ ಯಲ್ಲಿ ಆವರ್ತನಿಧಿ ʻಲೂಟಿ ಮಾಡಿದಾಗ, ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ ಹಗರಣದಲ್ಲಿ 47.10 ಕೋಟಿ ರೂ. ಅವ್ಯವಹಾರವಾದಾಗ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೇ? ಈ ಪ್ರಕರಣಗಳಲ್ಲಿ ಇ.ಡಿ. ಯಾಕೆ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿಲ್ಲ” ಎಂದು ಪ್ರಶ್ನಿಸಿದರು.

“ಎಲ್ಲ ಅಭಿವೃದ್ಧಿ ನಿಗಮಗಳ ಹಣವನ್ನು ಕಡ್ಡಾಯವಾಗಿ ರಾಜ್ಯ ಖಜಾನೆಯಲ್ಲಿ ಜಮಾ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಹಲವು ಮಾರ್ಗಸೂಚಿಗಳನ್ನು ಹಣಕಾಸು ಇಲಾಖೆ ಜಾರಿಗೊಳಿಸಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...