ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು

Date:

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಬಿ ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ವಿಚಾರಣೆಗಾಗಿ ನಾಗೇಂದ್ರ ಅವರಿಗೆ ಸಿಬಿಐ ನೋಟಿಸ್ ನೀಡಿತ್ತು. ಇದಾದ ಬಳಿಕ ಬಂಧನ ಭೀತಿಯಲ್ಲಿ ನಾಗೇಂದ್ರ ಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ನಾಗೇಂದ್ರಗೆ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಿದೆ. ಹಾಗೆಯೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ತಿಳಿಸಿದೆ.

ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ, ಇಡಿ ತನಿಖೆ ಮಾಡಿದೆ. ಈ ಹಿಂದೆ ಬಿ ನಾಗೇಂದ್ರ ಅವರನ್ನು ಜೈಲು ಪಾಲಾಗಿದ್ದರು. ನಂತರ ಜಾಮೀನು ಸಿಕ್ಕಿತ್ತು. ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಅದಾದ ಬಳಿಕ ಸಿಬಿಐ ನೋಟಿಸ್ ನೀಡಿದ ಹಿನ್ನೆಲೆ ಮತ್ತೆ ಬಂಧನದ ಭೀತಿ ಎದುರಾಗಿತ್ತು. ಆದರೆ ಇದೀಗ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ಏನಿದು ವಾಲ್ಮೀಕಿ ಹಗರಣ?

ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಗಳಿಂದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಅದಾದ ಬಳಿಕ ಈ ಹಣವನ್ನು ಶೆಲ್ ಕಂಪನಿಗಳ ಮೂಲಕ ದೋಚಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕರ್ನಾಟಕ ಪೊಲೀಸರು ಮತ್ತು ಸಿಬಿಐ ಎಫ್‌ಐಆರ್ ದಾಖಲಿಸಿದ್ದವು. ಇಡಿ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಈ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿ. ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...