ವಾಲ್ಮೀಕಿ ನಿಗಮ ಹಗರಣ | ಜುಲೈ 18ರವರೆಗೆ ಇಡಿ ಕಸ್ಟಡಿಗೆ ಮಾಜಿ ಸಚಿವ ನಾಗೇಂದ್ರ

Date:

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ಪಡೆದುಕೊಂಡಿದೆ. ಈ ಹಿಂದೆ, ಪರಿಶಿಷ್ಟ ಪಂಗಡ ಇಲಾಖೆಯ ಸಚಿವರಾಗಿದ್ದ ಬಿ ನಾಗೇಂದ್ರರನ್ನು ಇಡಿ ಕಸ್ಟಡಿಗೆ ನೀಡಿ ನ್ಯಾ. ಸಂತೋಷ್​ ಗಜಾನನ ಭಟ್​ ಆದೇಶ ಹೊರಡಿಸಿದ್ದಾರೆ.

ಬುಧವಾರ ಬೆಳಗ್ಗೆ ಇಡಿ ಅದಿಕಾರಿಗಳು ನಾಗೇಂದ್ರ, ಬಸನಗೌಡ ದದ್ದಲ್ ಸೇರಿ ಹಲವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಗುರುವಾರ ರಾತ್ರಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದರು. ಬಳಿಕ, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಶನಿವಾರ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಇರುವ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್​​ ಎದುರು ಹಾಜರುಪಡಿಸಲಾಗಿತ್ತು. ಇಡಿ ಅವರ ಮನವಿಯನ್ನು ಆಲಿಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ನಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ​ ಆದೇಶ ಹೊರಡಿಸಿದ್ದಾರೆ.

ಹಗರಣ ಸಂಬಂಧ ಇಡಿ ಹಲವರನ್ನು ವಿಚಾರಣೆ ನಡೆಸಿದ್ದು, ನಾಗೇಂದ್ರ ಅವರ ಸೂಚನೆಯ ಮೇಲೆ ಕೆಲವು ಬ್ಯಾಂಕ್‌ ಖಾತೆ ತೆರೆಯಲಾಗಿದೆ ಎಂದು ನಿಗಮದ ಮಾಜಿ ಎಂಡಿ ಪದ್ಮನಾಭ್ ಹೇಳಿಕೆ ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ನಲ್ಲಿ ನಡೆದ ಸಭೆಗೆ ನಾಗೇಂದ್ರ ಹಾಜರಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ಅಧಿಕಾರಿ ಚಂದ್ರಶೇಖರ್ ಅವರ ಡೆತ್ ​​ನೋಟ್​​ನಲ್ಲಿ ಸಚಿವ ಎಂದು ಉಲ್ಲೇಖವಾಗಿದೆ. ನಾಗೇಂದ್ರ ಆಪ್ತ ಹರೀಶ್​ಗೆ ಪದ್ಮನಾಭ್ 25 ಲಕ್ಷ ರೂ. ನೀಡಿರುವ ಬಗ್ಗೆಯೇ ಇಡಿ ತನಿಖೆ ನಡೆಸಿದೆ. ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ ಎಂಬುದಕ್ಕೆ ಹಲವು ಸಾಕ್ಷ್ಯಗಳಿವೆ ಎಂದು ಇಡಿ ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಶುಕ್ರವಾರ ವಿಚಾರಣೆ ಸಂಬಂಧ ಎಸ್​​ಐಟಿ ಮುಂದೆ ಹಾಜರಾಗಿದ್ದ ದದ್ದಲ್ ನಂತರ ಬೆಂಗಳೂರಿನ ನಿವಾಸಕ್ಕೆ ಬಂದೇ ಇಲ್ಲ. ಕುಟುಂಬಸ್ಥರ ಸಮೇತ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಯಲಹಂಕದ ಕೋಗಿಲು ಬಳಿ ಇರುವ ಬಸನಗೌಡ ದದ್ದಲ್ ವಿಲ್ಲಾದಲ್ಲಿ ಸದ್ಯ ಇಬ್ಬರು ಮನೆ ಕೆಲಸದವರು ಮಾತ್ರ ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...