ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ಸರ್ಕಾರದ ಮುಂದೆ 3 ಬೇಡಿಕೆ ಇಟ್ಟ ಶ್ರೀರಾಮುಲು

Date:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಬಹುಕೋಟಿ ಅಕ್ರಮ ಪ್ರಕರಣದಲ್ಲಿ ನಿಗಮದ ಹಣವನ್ನು ಸುಮಾರು 600ಕ್ಕೂ ಹೆಚ್ಚು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕೋಟಿ ರೂ. ನಗದನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 193 ಬ್ಯಾಂಕ್‌ಗಳಿಂದ 10 ಕೋಟಿ ರೂ. ಹಣವನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಈ ಹಣ ಬಾರ್ ಮತ್ತು ಚಿನ್ನದ ಅಂಗಡಿಗಳ ಖಾತೆಗಳಿಗೆ ವರ್ಗಾವಣೆ ಆಗಿತ್ತು ಎಂದು ತಿಳಿದುಬಂದಿದೆ. ಇದೀಗ ವಶಕ್ಕೆ ಪಡೆದ 10 ಕೋಟಿ ರೂ. ಸೇರಿ ಒಟ್ಟು 28 ಕೋಟಿ ರೂ. ಹಣವನ್ನು ಎಸ್‌ಐಟಿ ವಶಕ್ಕೆ ಪಡೆದುಕೊಂಡಿದೆ.

ಇನ್ನು, ಅಕ್ರಮದ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಪೂರ್ತಿ ಹಣವನ್ನು ಮರಳಿ ಪಡೆಯಬೇಕು. ಮಾಜಿ ಸಚಿವ ಬಿ ನಾಗೇಂದ್ರ ಅವರನ್ನ ಬಂಧಿಸಬೇಕು. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂಬ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...