ವಾಲ್ಮೀಕಿ ಅಕ್ರಮ | ಜಾಮೀನು ರದ್ದು ಅರ್ಜಿ ವಿಚಾರಣೆ, ಬಿ ನಾಗೇಂದ್ರಗೆ ಹೈಕೋರ್ಟ್‌ನಿಂದ ತುರ್ತು ನೋಟಿಸ್‌

Date:

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಪಡೆದಿರುವ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ(ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.

ನ್ಯಾಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಇ.ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿತು. ವಿಚಾರಣೆ ವೇಳೆ ಇ.ಡಿ ಪರ ಹಾಜರಿದ್ದ ಸಹಾಯಕ ಎಸ್​.ವಿ.ರಾಜು ಮತ್ತು ಪಿ. ಪ್ರಸನ್ನಕುಮಾರ್​, ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದಾಗ ಪ್ರತಿವಾದಿಗಳ (ನಾಗೇಂದ್ರ) ವಾದ ಆಲಿಸದೆ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ತುರ್ತು ನೋಟಿಸ್​ ಜಾರಿ ಮಾಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ನವೆಂಬರ್​ 15ಕ್ಕೆ ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದಲ್ಲಿ ನಾಗೇಂದ್ರ ಮೊದಲ ಆರೋಪಿಯಾದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಇತ್ತೀಚೆಗಷ್ಟೇ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ನೀಡಿದ್ದರು.

 ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ.ಗಳ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವನ್ನು ಬಿ ನಾಗೇಂದ್ರ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಸಾಕಷ್ಟು ಸಾಕ್ಷ್ಯಗಳನ್ನು ತನಿಖೆ ವೇಳೆ ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) 144 ಪುಟಗಳ ದೂರನ್ನು ಸಲ್ಲಿಸಿತ್ತು. ದೂರಿನನ್ವಯ, ಪಿಎಂಎಲ್‌ಎ ಕಾಯ್ದೆಯ ಕಲಂ 3 ಮತ್ತು 4ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ 4,970 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...