ರಾಯಚೂರು ವಿವಿ ಸೇರಿ ಎಲ್ಲ ಎಸ್‌ಟಿ ವಸತಿ ಶಾಲೆಗಳಿಗೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

Date:

ರಾಜ್ಯದ ಎಲ್ಲ ಎಸ್‌ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, “ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡಿಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂತಹ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದಿದ್ದು ಹೆಮ್ಮೆಯ ಮತ್ತು ಮಾದರಿ ಸಂಗತಿ” ಎಂದರು.

“ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲ ಕಲಿತರು, ಬರೆದರು, ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ. ರಾಮನ‌ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ” ಎಂದು ವಿಶ್ಲೇಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ” ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

“ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/ TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ? ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಬಿಜೆಪಿ ಜಾರಿಗೆ ತರಬೇಕು. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ” ಎಂದರು.

WhatsApp Image 2024 10 17 at 12.36.48 PM

“ನಮ್ಮ ಸರ್ಕಾರ ಎಲ್ಲ ಧರ್ಮ, ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಪ್ರಸನ್ನಾ ನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...