ಸೋಷಿಯಲ್ ಮೀಡಿಯಾದಲ್ಲಿ ಸಿಎಂ, ಸಿಎಂ ಪತ್ನಿಯ ಅವಾಚ್ಯ ನಿಂದನೆ: ಎಫ್‌ಐಆರ್ ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ, ಅಶ್ಲೀಲ ಪದಗಳಿಂದ ಭಾವಚಿತ್ರವನ್ನು ವಿರೂಪಗೊಳಿಸಿ ಹಾಗೂ ಅವರ ಪತ್ನಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಸಂಜಯ್ ಯಾದವ್ ಎಂಬುವವರು ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದೂರಿನಲ್ಲಿ ಏನಿದೆ?
ದೂರಿನಲ್ಲಿ, ದಿನಾಂಕ 11.01.2024 ರಂದು ಇನ್ಸ್‌ಟಾಗ್ರಾಮ್ ಸಾಮಾಜಿಕ ಜಾಲತಾಣದ ‘ಟ್ರೋಲ್ ಕನ್ನಡಿಗ(Troll Kannadiga)’ ಎಂಬ ಖಾತೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಟೋಪಿ ಹಾಗೂ ಗಡ್ಡ ಹಾಕಿ ಒಂದು ಸಮುದಾಯಕ್ಕೆ ಸೇರಿದವರಂತೆ ಬಿಂಬಿಸಲಾಗಿದೆ. ಅಲ್ಲದೇ, “ಮಿಸ್ಟೇಕ್ ಆಗಿ ಕುರುಬರ ವಂಶದಲ್ಲಿ ಹುಟ್ಟಿದ್ದಾನೆ. ಇವನು ಮಂಡ ಸಾಬ್ರಿಗೆ ಹುಟ್ಟಬೇಕಾಗಿತ್ತು” ಎಂದು ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

troll kannada

ಅದೇ ರೀತಿ, ಇದೇ ಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆಗಳನ್ನು ಜೋಡಿಸಿ ರಾಮಭಕ್ತರನ್ನು ಕಾಡುತ್ತಿರುವ ಸಿದ್ದರಾವಣ ಎಂದು ಡಿಸೈನ್ ಮಾಡಿ, ಅವಾಚ್ಯವಾಗಿ ನಿಂದಿಸಿ, ಪೋಸ್ಟ್ ಮಾಡಲಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದು, ಅದರ ಲಿಂಕ್ ಅನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೇ, ಫೇಸ್‌ಬುಕ್‌ನಲ್ಲಿ ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಪತ್ನಿಯನ್ನು ಉಲ್ಲೇಖಿಸಿ, ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಅವರ ಗೌರವಕ್ಕೆ ಧಕ್ಕೆ ತರಲಾಗಿದೆ. ಹೀಗಾಗಿ, ಈ ಮೂರು ಪೋಸ್ಟ್‌ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಂಜಯ್ ಯಾದವ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...