ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

Date:

ಕೇರಳದ ಪಾಲಕ್ಕಾಡ್‌ನಲ್ಲಿ ಶಾಲೆಯೊಂದರಲ್ಲಿ ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿಪಡಿಸಿದೆ. ಗೋದಲಿ ಧ್ವಂಸಗೊಳಿಸಿ ಬೆದರಿಕೆ ಹಾಕಿದೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಇಕ್ಕಟ್ಟಿನಲ್ಲಿ ಸಿಲುಕಿದೆ.

ಪಾಲಕ್ಕಾಡ್‌ನ ನಲ್ಲೆಪೆಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಈ ಸಂಬಂಧ ಮೂವರು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರನ್ನು ಬಂಧಿಸಲಾಗಿದೆ. ವಿಎಚ್‌ಪಿಯ ಸ್ಥಳೀಯ ಕಾರ್ಯಕರ್ತರಾದ ಕೆ.ಅನಿಲ್ ಕುಮಾರ್, ವಿ. ಸುಸಾಸನನ್ ಮತ್ತು ಕೆ. ವೇಲಾಯುಧನ್ ಎಂಬವರು ಬಂಧಿತರು.

ಇದನ್ನು ಓದಿದ್ದೀರಾ? ಜರ್ಮನಿ| ಕ್ರಿಸ್‌ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿಗೆ ಇಬ್ಬರು ಸಾವು, 7 ಭಾರತೀಯರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಇತರೆ ರಾಜ್ಯಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧವಾಗಿ ಬ್ಯಾಟ್ ಬೀಸುವ ಬಿಜೆಪಿ ಕೇರಳದಲ್ಲಿ ಅನಿವಾರ್ಯವಾಗಿ ಈ ಕೃತ್ಯವನ್ನು ಖಂಡಿಸಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಕೂಡ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ.

ಕಾಂಗ್ರೆಸ್ ಮತ್ತು ಸಿಪಿಎಂ ಬಿಜೆಪಿಯ ಕ್ರಿಶ್ಚಿಯನ್ ವಿರೋಧಿ ನಿಲುವು ಇದರಿಂದ ಎದ್ದು ಕಾಣುತ್ತದೆ ಎಂದು ಹೇಳಿದರೆ, ಬಿಜೆಪಿ ಇಕ್ಕಟ್ಟಿನಲ್ಲಿ ಸಿಲುಕಿ ಪರಿಸ್ಥಿತಿ ನಿಭಾಯಿಸುವ ಪ್ರಯತ್ನ ಮಾಡಿದೆ.

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಂದೀಪ್ ವಾರಿಯರ್, “ಬಿಜೆಪಿ ಕ್ರಿಶ್ಚಿಯನ್ ಸಮುದಾಯವನ್ನು ಧಮನಿಸುತ್ತಿದೆ. ಶಾಲೆಯಲ್ಲಿ ಬೆದರಿಕೆಯೊಡ್ಡಿದ ವಿಎಚ್‌ಪಿ ಸ್ಥಳೀಯ ಮುಖಂಡರು ಬಿಜೆಪಿ ಕಾರ್ಯಕರ್ತರು” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಕ್ರಿಸ್‌ಮಸ್‌ಗೆ ತೆರೆ ಕಾಣಲಿದೆ ದರ್ಶನ್ ಅಭಿನಯದ ‘ಡೆವಿಲ್’

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಪ್ರತಿಕ್ರಿಯಿಸಿ, “ಇತ್ತೀಚೆಗೆ ಪಕ್ಷ ತೊರೆದಿರುವ ಯಾರೋ ಪಿತೂರಿ ನಡೆಸಿರುವ ಶಂಕೆ ಇದೆ” ಎಂದಿದ್ದು ಘಟನೆಯಲ್ಲಿ ಭಾಗಿಯಾಗಿರುವ ವಿಎಚ್‌ಪಿ ಸ್ಥಳೀಯ ನಾಯಕರು ಸಕ್ರಿಯ ಬಿಜೆಪಿ ಕಾರ್ಯಕರ್ತರು ಎಂಬ ವಾರಿಯರ್ ಆರೋಪವನ್ನು ನಿರಾಕರಿಸಿದ್ದಾರೆ.

ಈ ನಡುವೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಕೂಡ ಈ ಘಟನೆಯನ್ನು ಖಂಡಿಸಿದ್ದು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶಾಲೆಯಲ್ಲಿ ಎಲ್ಲಾ ಧರ್ಮದ ಹಬ್ಬಗಳನ್ನು ಆಚರಿಸಬೇಕು ಎಂದು ಕೇರಳ ಬಿಜೆಪಿ ನಾಯಕ ಹೇಳಿಕೊಂಡಿದ್ದಾರೆ.

ಇನ್ನು ವಿಎಚ್‌ಪಿಯ ಬೆದರಿಕೆಯನ್ನು ವಿರೋಧಿಸಿ, ಸಿಪಿಎಂನ ಯುವ ಸಂಘಟನೆ ಭಾರತ ಯುವಜನ ಪ್ರಜಾಸತಾತ್ಮಕ ಫೆಡರೇಷನ್ (ಡಿವೈಎಫ್‌ಐ) ಸೋಮವಾರ ಶಾಲೆಯ ಮುಂದೆ ‘ಸಾಮರಸ್ಯ ಕರೋಲ್’ ಆಯೋಜಿಸಿತ್ತು.

ಈ ನಡುವೆ ಸಮೀಪದ ಮತ್ತೊಂದು ಶಾಲೆಯಲ್ಲಿ ಅಪರಿಚಿತ ಕಿಡಿಗೇಡಿಗಳು ಕ್ರಿಸ್‌ಮಸ್ ಅಲಂಕಾರವನ್ನು ಹಾಳುಗೆಡವಿರುವುದು ಕಂಡುಬಂದಿದೆ. ಇನ್ನೊಂದೆಡೆ ತತ್ತಮಂಗಲದ ಜಿಬಿಯುಪಿ ಶಾಲೆಯಲ್ಲಿ ವಿಎಚ್‌ಪಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...