ಸಂತ್ರಸ್ತೆಯ ಅಪಹರಣ ಪ್ರಕರಣ | ಆರು ದಿನಗಳ ಬಳಿಕ ಜೈಲಿನಿಂದ ಹೊರಬಂದ ಎಚ್ ಡಿ ರೇವಣ್ಣ

Date:

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ ಎಚ್ ​ಡಿ ರೇವಣ್ಣ ಅವರಿಗೆ ಸೋಮವಾರ (ಮೇ 13) ಷರತ್ತುಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು (ಮೇ 14) ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಎಚ್ ​ಡಿ ರೇವಣ್ಣ ಅವರು ಮಂಗಳವಾರ ಸಂಜೆಯೊಳಗೆ ಬಿಡುಗಡೆಯಾಗುತ್ತಾರೆ ಎಂಬ ಸುದ್ದಿ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್​ ಕಾರ್ಯಕರ್ತರು, ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು.

ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಯಿತು. ಮಾಧ್ಯಮದವರನ್ನು ನೋಡಿದ ಎಚ್ ಡಿ ರೇವಣ್ಣ, ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ, ಕೈಮುಗಿದು ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

IMG 20240514 WA0592

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿರುವ ಎಚ್.ಡಿ ರೇವಣ್ಣ ಅವರು ಅಲ್ಲಿಂದ ನೇರವಾಗಿ ಪದ್ಮನಾಭ ನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕಳೆದ ಮೇ 4ರಂದು ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಬಂಧಿಸಿದ್ದರು. ಇದೀಗ ದೇವೇಗೌಡರ ನಿವಾಸಕ್ಕೆ ತೆರಳಿರುವ ರೇವಣ್ಣ ತಂದೆ, ತಾಯಿ ಆಶೀರ್ವಾದ ಪಡೆದು ತೆರಳಲಿದ್ದಾರೆ.

ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ​ಷರತ್ತುಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕೋರ್ಟ್​ ಪ್ರಕ್ರಿಯೆಗಳು ಇಂದಿಗೆ (ಮೇ 14) ಮುಂದೂಡಲಾಗಿತ್ತು. ಹೀಗಾಗಿ ಎಚ್​ ಡಿ ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕೋರ್ಟ್​​ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಷರತ್ತುಬದ್ಧ ಜಾಮೀನು ನೀಡಿದ್ದ ನ್ಯಾಯಾಲಯ

ಎಚ್‌ ಡಿ ರೇವಣ್ಣ ತಮ್ಮ ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು ಮತ್ತು ನ್ಯಾಯಾಲಯದ ಲಿಖಿತ ಅನುಮತಿ ಪಡೆಯದೇ ರಾಜ್ಯದ ಗಡಿ ದಾಟುವಂತಿಲ್ಲ ಎಂಬುದು ಸೇರಿ ಆರು ಷರತ್ತು ವಿಧಿಸಿ ಜನಪ್ರತಿನಿಧಿಗಳ ವಿಶೇಷ (ಸತ್ರ) ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿತ್ತು.

ಎಚ್‌ ಡಿ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಸ್ತೃತ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಪ್ರಕಟಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...