ವಿಧಾನ ಪರಿಷತ್ ಚುನಾವಣೆ: ಐದು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

Date:

ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ.

ವಿಧಾನ ಪರಿಷತ್‌ನ ಒಟ್ಟು ಐದು ಸ್ಥಾನಗಳಾದ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಘೋಷಿಸಿದ್ದಾರೆ.

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿಯ ಸುರೇಶ್ ಕುಮಾರ್ ವಿರುದ್ಧ ಸೋಲು ಕಂಡಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಇತ್ತೀಚೆಗೆಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಟಿ.ಡಿ.ಶ್ರೀನಿವಾಸ್ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್​ ನೀಡಲಾಗಿದೆ. ಉಳಿದಂತೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್, ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಪಾಟೀಲ್ ಅವರಿಗೆ ಅವಕಾಶ ನೀಡಿದೆ.

ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಪದವೀಧರರು ಆಸಕ್ತಿಯನ್ನು ತೋರಿಸುತ್ತಿಲ್ಲ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...