ವಿಧಾನಸೌಧ ಕಟ್ಟಿಸಿದ್ದು ಕೆಂಗಲ್ ಹನುಮಂತಯ್ಯ, ದುರ್ದೈವ ಅಂದರೆ ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ: ಸಿದ್ದರಾಮಯ್ಯ

Date:

“ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು. ವಿಧಾನಸೌಧ  ಕಟ್ಟಿಸಿದ್ದು ಅವರು. ಆದರೆ ದುರ್ದೈವ, ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಶನಿವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ಅವರ ಆಡಳಿತ ನಮಗೆಲ್ಲಾ ಮಾದರಿ. ವಿಧಾನಸೌಧದ ಪೂರ್ವದಿಕ್ಕಿನಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಬರೆಸಿದ್ದು, ಜನಸೇವೆಯೇ ಜನಾರ್ದನ ಸೇವೆ ಎಂದು ಅದರ ಅರ್ಥ. ಬದ್ಧತೆ, ನಿಷ್ಠುರತೆಯಿಂದ ಸರ್ಕಾರದ ಕೆಲಸ ಮಾಡಿದ್ದರು. ಹಳೇ ಮೈಸೂರು ಭಾಗದವರಾದರೂ ವಿಶಾಲ ಕರ್ನಾಟಕವಾಗಬೇಕೆಂದು ಕರ್ನಾಟಕ ಏಕೀಕರಣದಲ್ಲಿ ಭಾಗವಹಿಸಿದ್ದರು. ಅವರ ತತ್ವ ಆದರ್ಶಗಳು ನಮಗೆ ಮಾದರಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಂಗಲ್ ಹನುಮಂತಯ್ಯನವರ ಜನ್ಮ ದಿನದಂದು ಅವರ ಸ್ಮರಣೆ ಮಾಡಿ ಗೌರವ ಸಲ್ಲಿಸಿದ್ದೇವೆ. ರಾಮನಗರ ಜಿಲ್ಲೆಯವರಾದ ಅವರು ಸಂವಿಧಾನ ಜಾರಿಯಾದ ನಂತರ ಮುಖ್ಯಮಂತ್ರಿಯಾದವರು. ಅವರ ಕಾಲದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿಯಾದವರು” ಎಂದು ಸ್ಮರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...