ವಿಜಯಪುರ ಮಹಾನಗರ ಪಾಲಿಕೆ ‘ಕೈ’ ವಶ: ತವರಲ್ಲೇ ಬಿಜೆಪಿ ಶಾಸಕ ಯತ್ನಾಳ್‌ಗೆ ಹಿನ್ನಡೆ

Date:

ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳ ಆಯ್ಕೆಯಲ್ಲಿ ಎರಡೂ ಸ್ಥಾನಗಳು ಕೂಡ ಕಾಂಗ್ರೆಸ್ ವಶವಾಗಿದ್ದು, ತವರು ನೆಲದಲ್ಲೇ ಬಿಜೆಪಿ ಶಾಸಕ ಯತ್ನಾಳ್‌ಗೆ ಹಿನ್ನಡೆಯಾಗಿದೆ.

ಮಂಗಳವಾರ ನಡೆದ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ನೂತನ ಮಹಾಪೌರರಾಗಿ ವಾರ್ಡ್‌ ನಂ 34ರ ಸದಸ್ಯೆ ಮಹೇಜಬೀನ ಹೋರ್ತಿ ಹಾಗೂ ಉಪ ಮಹಾಪೌರರಾಗಿ ವಾರ್ಡ್‌ ನಂ 18ರ ಸದಸ್ಯ ದಿನೇಶ್ ಹಳ್ಳಿ ಆಯ್ಕೆಯಾದರು. ಆ ಮೂಲಕ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದಿದೆ. 17 ಸ್ಥಾನಗಳಿದ್ದರೂ ಕೂಡ ಬಿಜೆಪಿಯವರಿಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ.

Vijayapura election

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಪೌರ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿತ್ತು. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಹಾಪೌರ ಸ್ಥಾನಕ್ಕೆ ಮಹೇಜಬೀನ ಹೋರ್ತಿ ಕಣಕ್ಕಿಳಿದರೆ, ಬಿಜೆಪಿಯಿಂದ ವಾರ್ಡ್‌ ನಂ 12ರ ಸದಸ್ಯೆ ರಶ್ಮಿ ಕೋರಿ ನಾಮಪತ್ರ ಸಲ್ಲಿಸಿದ್ದರು. ಎಸ್‌ಟಿ ವರ್ಗಕ್ಕೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯ ದಿನೇಶ್ ಹಳ್ಳಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧವಾಗಿ ಆಯ್ಕೆಯಾದರು.

35 ಸದಸ್ಯರಿರುವ ಮಹಾನಗರ ಪಾಲಿಕೆಗೆ 2022ರ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 10, ಎಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರರು 5 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಯಾವೊಂದು ಪಕ್ಷಕ್ಕೂ ನಿಶ್ಚಳ ಬಹುಮತ ಇಲ್ಲದೇ ಪಾಲಿಕೆ ಅತಂತ್ರವಾಗಿತ್ತು. ಬಳಿಕ ಮೇಯರ್, ಉಪಮೇಯರ್ ಸ್ಥಾನದ ಮೀಸಲಾತಿ ಪ್ರಶ್ನಿಸಿ ಕೆಲ ಸದಸ್ಯರು ಹೈಕೋರ್ಟ್‌ ಮೇಟ್ಟಿಲೇರಿದ್ದ ಕಾರಣ 14 ತಿಂಗಳಿಂದ ಚುನಾವಣೆ ನಡೆದಿರಲಿಲ್ಲ.

vijapura mc

10 ಕಾಂಗ್ರೆಸ್ ಸದಸ್ಯರು ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ಕಾಂಗ್ರೆಸ್​ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ.

ಬೆಳಗಾವಿಯ ಪ್ರಾದೇಶಿಕ ಆಯುಕ್ತರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯತ್ನಾಳ್ ಹಾಗೂ ಬಿಜೆಪಿ ಸದಸ್ಯರು ಕಪ್ಪುಪಟ್ಟಿ ಪ್ರದರ್ಶಿಸಿದರು. ಬಿಜೆಪಿಯ 17 ಸದಸ್ಯರು ಹಾಗೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿಸಿದ್ದರು.

ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣನವರ್ ಸರ್ಕಾರದ ಕೈಗೊಂಬೆಯಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ಕೂಡ ನಿರ್ಮಾಣವಾಗಿತ್ತು.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, “ಪಾಲಿಕೆಯ ಬಿಜೆಪಿ ಸದಸ್ಯ ವಿಜಯಕುಮಾರ್ ಬಿರಾದಾರ್ ನಿಧನರಾಗಿರುವ ಕಾರಣ ಚುನಾವಣೆ ಮುಂದೂಡುವಂತೆ ಮನವಿ ಮಾಡಿದ್ದೆವು. ಈ ಕುರಿತು ಕಲಬುರಗಿಯ ಹೈಕೋರ್ಟಿಗೂ ಅರ್ಜಿ ಸಲ್ಲಿಕೆ ಮಾಡಿದ್ದೆವು. ಅರ್ಜಿ ವಿಚಾರಣೆ ಹಾಗೂ ನಮ್ಮ ಮನವಿಯನ್ನು ಆಲಿಸದೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರು ಮುಂದಾದರು. ಈ ಕಾರಣದಿಂದ ಚುನಾವಣಾ ಪ್ರಕ್ರಿಯೆ ಬಹಿಷ್ಕರಿಸಿದ್ದೇವೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣನವರ್ ಸರ್ಕಾರದ ಕೈಗೊಂಬೆಯಾಗಿ ವರ್ತನೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...