ಹೊಸಬರಿಗೆ ಟಿಕೆಟ್ ಕೊಡಿ ಎಂದವನನ್ನು ನೇಣಿಗೆ ಹಾಕಿ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಕಿಡಿ

Date:

ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಡುವಂತೆ ಯಾರು ಹೇಳಿದ್ದರೋ, ಅವರನ್ನು ನೇಣಿಗೆ ಹಾಕಿ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಹೊಸಬರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಯಾರು ಸಲಹೆ ಕೊಟ್ಟಿದ್ದರೋ ಗೊತ್ತಿಲ್ಲ. ಅವರನ್ನು ನೇಣಿಗಾದರೂ ಹಾಕಿ, ಅವರ ಕಾಲನ್ನಾದರೂ ಕಡಿಯಿರಿ” ಎಂದು ಕಿಡಿಕಾರಿದ್ದಾರೆ.

“ಈ ಬಾರಿಯ ಚುನಾವಣೆಯಲ್ಲಿ 70ಕ್ಕೂ ಹೆಚ್ಚು ಹೊಸಬರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಅವರಲ್ಲಿ ಗೆದ್ದವರು ಮಾತ್ರ ಬೆರಳೆಣಿಕೆಯಷ್ಟು ಮಂದಿ. ಹಿರಿಯರಿಗೆ ಟಿಕೆಟ್‌ ನೀಡಿದ್ದರೆ, ಎಲ್ಲರೂ ಗೆಲ್ಲುತ್ತಿದ್ದರು. ಬಿಜೆಪಿ ಮತ್ತೆ ಅಧಿಕಾರ ಹಿಡಿಯುತ್ತಿತ್ತು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರ ಕರ್ನಾಟಕದ ಪ್ರಭಾವಿ ನಾಯಕ, ಲಿಂಗಾಯತ ಸಮುದಾಯದ ಮುಖಂಡ ಜಗದೀಶ್‌ ಶೆಟ್ಟರ್‌ ಅವರು ಪಕ್ಷ ಬಿಟ್ಟಿದ್ದು, ಪಕ್ಷಕ್ಕೆ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ”ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ. ಈಗ ಯಾರನ್ನು ನೇಣಿಗೆ ಹಾಕುವಿರಿ ಬಿಜೆಪಿಗರೇ? ಅಮಿತ್ ಷಾರವರನ್ನೋ? ಬಿ ಎಲ್ ಸಂತೋಷರನ್ನೊ? ಪ್ರಹ್ಲಾದ್ ಜೋಶಿಯವರನ್ನೋ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ?” ಎಂದು ವ್ಯಂಗ್ಯವಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...