ವಿಜಯ ಸಂಕಲ್ಪ ಯಾತ್ರೆ: ಸಮಾರೋಪ ಸಮಾವೇಶಕ್ಕೆ 10 ಲಕ್ಷ ಜನ ಸೇರಿಸಲು ಮುಂದಾದ ಬಿಜೆಪಿ

Date:

  • ದಾವಣಗೆರೆಯಲ್ಲಿ ಬಿಜೆಪಿ ಶಕ್ತಿಪ್ರದರ್ಶನ
  • ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಹೆಸರಿನ ಮೇಲೆ ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಮಾರ್ಚ್ 25ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು ಅದಕ್ಕಾಗಿ 10ಲಕ್ಷ ಜನರನ್ನು ಕಲೆಹಾಕಲು ಪಕ್ಷ ಮುಂದಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದ ಜಿ ಎಂ ಸಿದ್ದೇಶ್ವರ್, ದಾವಣಗೆರೆ ಜಿಲ್ಲೆಯಿಂದಲೇ 3 ಲಕ್ಷ ಜನರು ಕಾರ್ಯಕ್ರದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾವೇಶ ನಡೆಯಲಿರುವ ಜಿಎಂಐಟಿ ಕಾಲೇಜಿನ ಪಕ್ಕದ 400 ಎಕರೆ ಜಾಗದಲ್ಲಿ ಪೆಂಡಾಲ್ ಹಾಕಲಾಗಿದೆ. ಜನರ ನಡುವೆಯೇ ಮೋದಿ ವೇದಿಕೆ ಪ್ರವೇಶಿಸುವ ಯೋಜನೆ ರೂಪುಗೊಂಡಿದೆ. ಅದಕ್ಕೆ ತಕ್ಕಂತೆ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ- ರಾಜ್ಯದ ಸಚಿವರ ಜೊತೆಗೆ ಇತರ ಪ್ರಮುಖರು ಭಾಗವಹಿಸುತ್ತಾರೆ ಎಂದರು.

ಇನ್ನು ವಿಜಯ ಸಂಕಲ್ಪ ಯಾತ್ರೆ ಬಗ್ಗೆ ಮಾಹಿತಿ ನೀಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, 4 ವಿಜಯ ಸಂಕಲ್ಪ ಯಾತ್ರೆಗಳು ಯಶಸ್ವಿಯಾಗಿವೆ. 5,600 ಕಿಮೀಗಳನ್ನು ಒಟ್ಟು ಯಾತ್ರೆ ಮೂಲಕ ಕ್ರಮಿಸಲಾಗಿದೆ. ಲಕ್ಷಾಂತರ ಜನರು ಯಾತ್ರೆಯಲ್ಲಿ ಭಾಗಿಯಾಗಿದ್ದು, ಇದರ ಮೂಲಕ ನಾವು 224 ಕ್ಷೇತ್ರಗಳನ್ನೂ ತಲುಪಿದ್ದೇವೆ ಎಂದು ತಿಳಿಸಿದರು.

ಇದೇ 25ರಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಲ್ಗೊಳ್ಳಲಿದ್ದಾರೆ. ಬರುವವರಿಗೆ ದೊಡ್ಡ ಪ್ರಮಾಣದಲ್ಲಿ ಊಟೋಪಚಾರ ವ್ಯವಸ್ಥೆ ಮಾಡಲಾಗಿದ್ದು, 400 ಕೌಂಟರ್ ಗಳನ್ನು ತೆರೆಯಲಾಗುತ್ತದೆ. ಸಾವಿರ ಜನ ಅಡುಗೆ ಮಾಡುವವರನ್ನು ಇದಕ್ಕೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಉಳಿದಂತೆ ಪಾರ್ಕಿಂಗ್ ಗೆ 44 ಜಾಗಗಳನ್ನು ಗುರುತಿಸಿದ್ದೇವೆ. ಕಾರ್ಯಾಲಯ, ಸ್ವಚ್ಛತೆ ಸೇರಿ ಹಲವು 45 ತಂಡಗಳನ್ನು ನಿಯೋಜಿಸಿದ್ದೇವೆ. 5 ಸಾವಿರ ಪ್ರಬಂಧಕರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ಟೆಂಗಿನ ಕಾಯಿ ವಿವರಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...