ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ, ಬಿಎಸ್‌ವೈ ವಿಶ್ರಾಂತಿ ಪಡೆಯಲಿ: ಶಾಸಕ ರಮೇಶ ಜಾರಕಿಹೊಳಿ

Date:

ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ಬಿ ವೈ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಪಕ್ಷದಲ್ಲಿ ಜ್ಯೂನಿಯರ್ ಆಗಿರುವ ಅವರಿಗೆ ಯಾವ ಸಿದ್ಧಾಂತ ಗೊತ್ತಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿ” ಎಂದರು.

“ವಿಜಯೇಂದ್ರ ಬಗ್ಗೆ ಅಷ್ಟೇ ನನ್ನ ವಿರೋಧ. ಬಿ ಎಸ್‌ ಯಡಿಯೂರಪ್ಪ ಅವರನ್ನು ಎಂದಿಗೂ ವಿರೋಧಿಸುವುದಿಲ್ಲ. ಅವರು ಪಕ್ಷದ ಪ್ರಶ್ನಾತೀತ ನಾಯಕ. ಅನಂತಕುಮಾರ ನಿಧನರಾದ ನಂತರ ನಮ್ಮ ಪಕ್ಷದಲ್ಲಿ ಯಾರೂ ಪ್ರಬಲ ನಾಯಕರಾಗಿ ಬೆಲೆಯಲಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಮಮತಾ ರಾಜೀನಾಮೆ – ಭಾವನಾತ್ಮಕ ರಾಜಕೀಯವೇಕೆ?

“ರಾಜ್ಯದಲ್ಲಿ 120ರಿಂದ 130 ಸ್ಥಾನ ಗೆಲ್ಲಿಸಿಕೊಂಡು ಬರುವ ಶಕ್ತಿ ನಮ್ಮಲ್ಲಿದೆ. 15ರಿಂದ 20 ಜನರಿಗೆ ಸಾಮೂಹಿಕವಾಗಿ ನಾಯಕತ್ವ ಕೊಡಿ. ಇಂಥ ಕೆಲಸ ಮಾಡುವಂತೆ ಟಾಸ್ಕ್‌ ಕೊಡಿ. ಅದರಲ್ಲಿ ವಿಫಲವಾದರೆ, ಪಕ್ಷದ ಹೊರಹಾಕಿ ಎಂದಿದ್ದೇವೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ವಿಶ್ರಾಂತಿ ಅಗತ್ಯವಿದೆ. ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ” ಎಂದರು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಆರ್‌ಎಸ್‌ಎಸ್‌ನವರು ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, “ಸಭೆಯಲ್ಲಿ ಏನು ಚರ್ಚಿಸಲಾಯಿತು. ಮುಖಂಡರು ಯಾರನ್ನು ಬೈದರು ಎಂದು ಹೇಳಲು ಬರುವುದಿಲ್ಲ. ಆದರೆ, ಬಿಜೆಪಿ ಆಡಳಿತವನ್ನು ಒಬ್ಬರ ಕೈಯಲ್ಲಿ ಕೊಡುವುದು ಬೇಡ ಎಂದಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...