ಖಾಸಗಿತನ, ನೀತಿ ಸಂಹಿತೆ ಉಲ್ಲಂಘಿಸುವುದು ‘ವಿಕಸಿತ ಭಾರತ’ ಸಂದೇಶ; ಕಾಂಗ್ರೆಸ್ ವಾಗ್ದಾಳಿ

Date:

2024ರ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದ ದಿನಗಳ ನಂತರ ಕೇಂದ್ರದಲ್ಲಿರುವ ನರೇಂದ್ರ ಸರ್ಕಾರವು ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ವಿರೋಧ ಪಕ್ಷಗಳು, ಸಾಮಾಜಿಕ ಕಾರ್ಯಕರ್ತಕರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರವು ಕಳುಹಿಸುತ್ತಿರುವ ‘ವಿಕಸಿತ ಭಾರತ’ ಯಾತ್ರೆಯು ನೀತಿ ಸಂಹಿತೆ ಉಲ್ಲಂಘನೆ ಮಾತ್ರವಲ್ಲದೆ, ಖಾಸಗಿತನಕ್ಕೆ ಧಕ್ಕೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಪತ್ರದ ಜೊತೆಗೆ ವಿಕಸಿತ ಭಾರತ ಸಂಪರ್ಕ ಸಂದೇಶವನ್ನು ವಾಟ್ಸಾಪ್ ಮೂಲಕ ಕಳುಹಿಸಲಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್, ಕೇಂದ್ರದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಕೇಂದ್ರ ಸರ್ಕಾರವು ಆಡಳಿತ ದುರ್ಬಳಕೆ ಮಾಡುತ್ತಿದೆ. ಬಿಜೆಪಿಯ ರಾಜಕೀಯ ಹಿತಾಸಕ್ತಿಗಾಗಿ ಜನರ ಖಾಸಗಿ ಮಾಹಿತಿಯನ್ನು ದುರ್ಬಳಕೆ ಮಾಡಿದೆ” ಎಂದು ಹೇಳಿರುವ ಶಶಿ ತರೂರ್ ಚುನಾವಣಾ ಆಯೋಗ ಈ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಮೋದಿಯಿಂದ ಯುಎಇಯಲ್ಲಿರುವ ಭಾರತೀಯ, ಪಾಕ್‌, ಬ್ರಿಟನ್‌ ವಲಸಿಗರಿಗೆ ಅಚ್ಚರಿಯ ವಾಟ್ಸಾಪ್ ಸಂದೇಶ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆನ್‌ಲೈನ್ ಸಂದೇಶದಲ್ಲಿ “ನನ್ನ ಪ್ರಿಯ ಕುಟುಂಬ ಸದಸ್ಯರೇ” ಎಂದು ಮೋದಿ ಸಂಭೋದಿಸುತ್ತಾರೆ. ಹಾಗೆಯೇ ಭಾರತ ಸರ್ಕಾರದ ಯೋಜನೆಗಳು ಮತ್ತು ಉಪಕ್ರಮಗಳ ಕುರಿತು ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ಕೋರಲಾಗಿದೆ. ಇನ್ನು ಯುಎಇ ಮೂಲದ ಆಂಟೋನಿ ಜೆ ಪರ್ಮಲ್ ಲಿಂಕ್ಡಿನ್ ಪೋಸ್ಟ್ ಅನ್ನು ಕೂಡಾ ತರೂರ್ ಹಂಚಿಕೊಂಡಿದ್ದಾರೆ.

“ನಿನ್ನೆ ಯುಎಇಯಲ್ಲಿರುವ ಬೇರೆ ಬೇರೆ ದೇಶದ ಜನರ ವೈಯಕ್ತಿಕ ವಾಟ್ಸಾಪ್ ಖಾತೆಗೆ ಭಾರತದ ಪ್ರಧಾನಿ ಮೋದಿಯಿಂದ ಸಂದೇಶ ಬಂದಿದೆ. ಇದು ಖಾಸಗಿತನದ ಉಲ್ಲಂಘನೆಯಾಗಿದೆ. ಸಾವಿರಾರು ಭಾರತೀಯರೇತರ ಖಾಸಗಿ ಮೊಬೈಲ್ ಸಂಖ್ಯೆಗಳಿಗೆ ಈ ಸಂದೇಶವನ್ನು ಕಳುಹಿಸಲಾಗಿದೆ. ನಮ್ಮ ಸಂಖ್ಯೆ ಬಿಜೆಪಿ ಮತ್ತು ಭಾರತೀಯ ಸರ್ಕಾರಕ್ಕೆ ಸಿಗುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ವಿದೇಶದಲ್ಲಿರುವ ಭಾರತೀಯ ವಲಸಿಗರಿಗೆ ಈ ಸಂದೇಶ ಬಂದಿರುವ ಜೊತೆಗೆಯೇ ಯುಎಇಯಲ್ಲಿರುವ ಪಾಕಿಸ್ತಾನ ಮತ್ತು ಬ್ರಿಟನ್ ವಲಸಿಗರಿಗೂ ಭಾರತ ಸರ್ಕಾರದ ಈ ಸಂದೇಶ ತಲುಪಿರುವುದು ಚರ್ಚೆಗೆ ಗ್ರಾಸವಾಗಿದೆ. ಇನ್ನು ಯುಎಇ ನಿವಾಸಿಗಳಿಗೂ ಈ ವಾಟ್ಸಾಪ್ ಸಂದೇಶ ತಲುಪಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...