ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

Date:

“ಕಾಂಗ್ರೆಸ್​ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸುವ ನೀಡುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

“ಉಚಿತ ಗ್ಯಾರಂಟಿ ಯೋಜನೆ ಕೊಡಲು ಯಾವ ಜೇಬಿಗೆ ಕೈ ಹಾಕಿದ್ದಾರೆ” ಎಂದು ಹೇಳುತ್ತಾ ಈ ರೀತಿಯ ಎಡವಟ್ಟು ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನ ಕೇಳಬೇಕು. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

“ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ” ಎನ್ನುತ್ತಲೇ ಗ್ಯಾರಂಟಿಗಳನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ.

“ಬೆಳಗ್ಗೆ ಎದ್ದು ಯಾವ ಪತ್ರಿಕೆ ನೋಡಿದರೂ ಗ್ಯಾರಂಟಿಯದ್ದೇ ಜಾಹೀರಾತು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಫೋಟೋಗಳನ್ನು ಹಾಕಿಕೊಂಡು, ಈಗಾಗಲೇ ₹300 ಕೋಟಿಯಷ್ಟು ಹಣವನ್ನು ಜಾಹೀರಾತಿಗಾಗಿ ಖರ್ಚು ಮಾಡಿದ್ದಾರೆ. ಅದೆಲ್ಲವೂ ನಿಮ್ಮ ದುಡ್ಡು. ಈ ಹಣ ಕಾಂಗ್ರೆಸ್ ಕಚೇರಿಯಿಂದಲೋ ಅಥವಾ ಅವರ ಜೇಬಿನಿಂದ ಹಾಕಿರುವ ದುಡ್ಡಲ್ಲ. ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ದುಡ್ಡು ಕೊಟ್ಟಿಲ್ಲ ಎಂದು ದೂರುತ್ತಿದ್ದಾರೆ” ಎಂದು ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರ್ಕಾರದ ನಡೆಯನ್ನು ಮಾಜಿ ಸಿಎಂ, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ವರದಿ: ಚಂದನ್ ತುಮಕೂರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...