ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಜನವರಿ 7ರಂದು ತೀರ್ಪನ್ನು ಕಾಯ್ದಿರಿಸಿದ್ದು, ಮಂಗಳವಾರ ಪ್ರಕಟಿಸಿದೆ.
ಇದನ್ನು ಓದಿದ್ದೀರಾ? ವಿನಯ್ ಕುಲಕರ್ಣಿ ಅರ್ಜಿ ಮತ್ತೆ ವಜಾ; ಧಾರವಾಡಕ್ಕಿಲ್ಲ ಪ್ರವೇಶ
ಈ ಹಿಂದೆ ವಿನಯ್ ಕುಲಕರ್ಣಿಗೆ 2021ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷಿಗಳಿಗೆ ಬೆದರಿಕೆ ಹಾಕಿ ಜಾಮೀನು ಷರತ್ತನ್ನು ಕುಲಕರ್ಣಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಸಿಬಿಐ, ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿತ್ತು.
ಸಿಬಿಐ ಮನವಿಯಲ್ಲಿ 2025ರ ಜೂನ್‌ನಲ್ಲಿ ಸುಪ್ರೀಂ ಕೋರ್ಟ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ್ದು, ಕಳೆದ ಏಳು ತಿಂಗಳಿನಿಂದ ಕುಲಕರ್ಣಿ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವ ಕಾರಣ ವಿನಯ್ ಜೈಲಿನಲ್ಲೇ ಇರಬೇಕಾಗಿದೆ.
ಏನಿದು ಯೋಗಿಶ್ ಗೌಡ ಕೊಲೆ ಪ್ರಕರಣ?
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರನ್ನು ಜಿಮ್ ಮುಂಭಾಗದಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅದರಲ್ಲಿ 15ನೇ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ.





