ವಿನಯ್‌ ಕುಲಕರ್ಣಿಗಿಲ್ಲ ಧಾರವಾಡಕ್ಕೆ ಪ್ರವೇಶ; ಅರ್ಜಿ ವಜಾ ಮಾಡಿದ ಹೈಕೋರ್ಟ್

Date:

  • ಧಾರವಾಡ ಗ್ರಾಮೀಣ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನೆಡೆ
  • ಅತಂತ್ರ ಸ್ಥಿತಿಯಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ

ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪದ ಹೊತ್ತು ಜಾಮೀನಿನ ಮೇಲೆ ಹೊರಬಂದಿರುವ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿನಯ್‌ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಏ.17 ರಂದು ವಿಚಾರಣೆ ನಡೆಸಿತ್ತು.

ವಿನಯ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ ಹೆಚ್ ಹನುಮಂತರಾಯ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸಲಾಗಿದ್ದು, ಪ್ರಚಾರ ನಡೆಸಬೇಕಾಗಿರುವುದರಿಂದ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ” ಮನವಿ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ. ಜಯಂತ ಕುಮಾರ್ ಪೀಠವು ಏ.18 ರಂದು ವಿನಯ್ ಕುಲಕರ್ಣಿ ಮನವಿ ತಿರಸ್ಕರಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಧಾರವಾಡಕ್ಕೆ ವಿನಯ್‌ ಕುಲಕರ್ಣಿ ಪ್ರವೇಶಿಸದಂತೆ ಸುಪ್ರೀಂಕೋರ್ಟ್ ನಿರ್ಬಂಧ ಮಾಡಿದೆ. ಆದರೂ ಕೂಡ ಧಾರವಾಡದಿಂದ ಟಿಕೆಟ್ ಏಕೆ ಕೊಟ್ಟಿದೆ” ಎಂದು ವಿನಯ್ ಪರ ವಕೀಲರನ್ನು ಖಾರವಾಗಿ ಪ್ರಶ್ನಿಸಿದರು.

“ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ 90 ಸಾಕ್ಷಿಗಳಿವೆ. ಒಂದು ವೇಳೆ ವಿನಯ್ ಕಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ” ಎಂದು ಅರ್ಜಿ ವಜಾ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...