16 ಮತಗಳಿಂದ ಸೋತಿದ್ದ ಸೌಮ್ಯಾರೆಡ್ಡಿ ಕೇಸು-ಸುಪ್ರೀಮ್ ಕೋರ್ಟ್ ಏನು ಹೇಳಿತು?

Date:

2023ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಮತ ಎಣಿಕೆ ವಿವಾದದ ಸಂಬಂಧ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಚುನಾವಣಾ ಎಣಿಕೆಯಲ್ಲಿ ಅಚಾತುರ್ಯ ನಡೆದಿದೆ ಎಂದು ಆರೋಪಿಸಿದ್ದ ಸೌಮ್ಯಾ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಕೋರಿಕೆ ಮೇರೆಗೆ ಮತ ಎಣಿಕೆಗೆ ಸಂಬಂಧಿಸಿದ ಡಿವಿಡಿ ಮತ್ತು ಚುನಾವಣಾ ದಾಖಲೆಗಳನ್ನು ರೆಕಾರ್ಡ್‌ನಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ರಾಮಮೂರ್ತಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, “ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಹೇಳಿದೆ. ಲಿಖಿತ ಹೇಳಿಕೆ ಸಲ್ಲಿಸುವಂತೆ ರಾಮಮೂರ್ತಿ ಅವರಿಗೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಸೌಮ್ಯಾ ರೆಡ್ಡಿ ಕೇವಲ 16 ಮತಗಳ ಅಂತರದಿಂಂದ ರಾಮಮೂರ್ತಿ ವಿರುದ್ಧ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂದು ಸೌಮ್ಯಾ ರೆಡ್ಡಿ ಆರೋಪಿಸಿದ್ದರು. ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

“ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ” ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.

ಅವರ ಅರ್ಜಿಯನ್ನು ಆಲಿಸಿದ್ದ ಹೈಕೋರ್ಟ್‌, ಡಿವಿಡಿ ಸೇರಿದಂತೆ 10 ಪ್ರಮುಖ ದಾಖಲೆಗಳನ್ನು ಹಾಜರುಪಡಿಸಲು ಫೆ.14ರಂದು ಅನುಮತಿ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...