ಮತ ಕಳವು | ಚು. ಆಯೋಗದ ಪರ ಪತ್ರ ಬರೆದವರು ಆಳಂದಕ್ಕೆ ಬರಲಿ: ಶಾಸಕ ಬಿ.ಆರ್ ಪಾಟೀಲ್

Date:

ಆಳಂದ ಕ್ಷೇತ್ರದಲ್ಲಿ ಮತ ಕಳವಿಗೆ ಯತ್ನಿಸಿದ್ದವರಿಗೆ ಚುನಾವಣಾ ಆಯೋಗವು ನೆರವು ನೀಡಿದೆ ಎಂಬುದು ಸ್ಪಷ್ಟವಾಗಿ ಕಂಡುಬಂದಿದೆ. ಆದರೆ, ಕೆಲವರು ‘ಮತಗಳವು ಕುರಿತು ಚುನಾವಣಾ ಆಯೋಗದ ಮೇಲೆ ಆರೋಪ ಮಾಡುವುದು ಸರಿಯಲ್ಲ’ ಎಂದು ವಾದಿಸಿ ಪತ್ರ ಬರೆದಿದ್ದಾರೆ. ಅವರು ಅವರೆಲ್ಲರೂ ಒಮ್ಮೆ ಆಳಂದ ಕ್ಷೇತ್ರಕ್ಕೆ ಭೇಟಿ ನೀಡಿ ವಾಸ್ತವವನ್ನು ಪರಿಶೀಲಿಸಲಿ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಆಳಂದ ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದಾರೆ.

ಇತ್ತೀಚೆಗೆ, ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡು 272 ಮಂದಿ ಚಿಂತಕರು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರ ಬರೆದವರಲ್ಲಿ, ನಿವೃತ್ತ ನ್ಯಾಯಮೂರ್ತಿ ಎಸ್.ಎನ್ ಧಿಂಗ್ರಾ, ನಿರ್ಮಲ್ ಕೌರ್ ಹಾಗೂ ಇತರ ಚಿಂತಕರು ಸೇರಿಸಿದ್ದಾರೆ. ಅವರು ಪತ್ರ ಬರೆದಿರುವುದನ್ನು ಬಿ.ಆರ್‌ ಪಾಟೀಲ್ ಖಂಡಿಸಿದ್ದು, ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಆರ್ ಪಾಟೀಲ್, “ಆಳಂದ ಕ್ಷೇತ್ರದ ಮತಗಳವು ಆರೋಪ ಕುರಿತು ಎಸ್‌ಐಟಿ ತನಿಖೆ ಮಾಡುತ್ತಿದೆ. ಅಂತೆಯೇ, ವಿವಿಧೆಡೆ ತನಿಖೆ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪತ್ರ ಬರೆದಿರುವುದು ಯಾಕೆ? ತಮ್ಮ ಅಭಿಪ್ರಾಯ ಹೇಳುವುದಿದ್ದರೆ, ತನಿಖೆ ಮುಗಿದ ಬಳಿಕ ಹೇಳಲಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪತ್ರ ಬರೆದವರು ಆಳಂದ ಕ್ಷೇತ್ರಕ್ಕೆ ಭೇಟಿ ನೀಡಲಿ, ಪರಿಶೀಲನೆ ನಡೆಸಲಿ. ಅವರಿಗೆ ಬರುವುದಾದರೆ ಎಲ್ಲ ರೀತಿಯ ಸಕಲ ವ್ಯವಸ್ಥೆ ಮಾಡಿಕೊಡುವೆ. ಕ್ಷೇತ್ರದಲ್ಲಿ ತಿರುಗಾಡಿ ತಂತ್ರ, ಪ್ರತಿತಂತ್ರಗಳ ಬಗ್ಗೆ ಖುದ್ದು ತಿಳಿದುಕೊಳ್ಳಲಿ” ಎಂದಿದ್ದಾರೆ.

“ಆಳಂದ ಕ್ಷೇತ್ರದಲ್ಲಿ ಮತಕಳವು ನಡೆಸಿರುವ ಬಗ್ಗೆ ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಆಯೋಗದ ತನಿಖೆಯಲ್ಲಿಯೇ 5,994 ಮತಗಳು ಅಳಿಸಲು ಅರ್ಜಿ ಸಲ್ಲಿಸಿರುವುದು ಗೊತ್ತಾಗಿದೆ. ಆ ಬಳಿಕ, ಚುನಾವಣಾ ಅಧಿಕಾರಿಯೇ ಆಳಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆಯೇ ತನಿಖೆ ನಡೆಯುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...