‘ವೋಟ್ ಚೋರಿ’ ಪದ ಬಳಕೆ ಮತದಾರರು, ಚುನಾವಣಾ ಸಿಬ್ಬಂದಿ ಮೇಲಿನ ದಾಳಿ: ಚುನಾವಣಾ ಆಯೋಗ

Date:

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ ಮತ ಕಳವು ವಿಚಾರವಾಗಿ ‘ವೋಟ್‌ ಚೋರಿ’ ಎಂಬ ಪದ ಬಳಸಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್‌ ಮತ್ತು ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಚುನಾವನಾ ಆಯೋಗ, ‘ವೋಟ್ ಚೋರಿ’ ರೀತಿಯ ಪದ ಬಳಕೆಯು ಮತದಾರರು ಮತ್ತು ಚುನಾವಣಾ ಸಿಬ್ಬಂದಿ ಮೇಲಿನ ದಾಳಿಯಾಗಿದೆ ಎಂದು ಹೇಳಿದೆ.

ರಾಹುಲ್ ಗಾಂಧಿ ಅವರು ಇತ್ತೀಚೆಗೆ ಪ್ರತಿಕಾಗೋಷ್ಠಿ ನಡೆಸಿದ್ದು, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ‘ಮತ ಕಳವು’ ನಡೆದಿದೆ. ಮಹದೇವಪುರ ವ್ಯಾಪ್ತಿಯಲ್ಲಿ ಮತಚಲಾಯಿಸಲು ಕರ್ನಾಟಕದವರಲ್ಲದ ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಈ ಅಕ್ರಮದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲು ನೆರವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನೂ ನಡೆಸಿದ್ದರು.

ಮಾತ್ರವಲ್ಲದೆ, ಬಿಹಾರದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ನಲ್ಲಿಯೂ ಚುನಾವಣಾ ಅಕ್ರಮ ನಡೆಯುತ್ತಿದೆ. ಬಿಹಾರ ಮೂಲದವರಲ್ಲದ ವ್ಯಕ್ತಿಗಳನ್ನು ಮತದಾರ ಪಟ್ಟಿಯಲ್ಲಿ ಸೇರಿಸಲಾಗುತ್ತಿದೆ. ಬಿಹಾರದವರನ್ನು ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂಬುದು ಕಂಡುಬರುತ್ತಿದೆ. ಇದರ ವಿರುದ್ಧ ವಿಪಕ್ಷಗಳು ಪ್ರಶ್ನೆ ಎತ್ತುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಗಂಭೀರ ವಿಚಾರಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ, ಮಹದೇವಪುರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ತನ್ನ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಿದೆ. ಬಿಹಾರದಲ್ಲಿ, ಮತದಾರರ ಪಟ್ಟಿಯಿಂದ ಹೊರಹಾಕಲಾದ ಮತದಾರರ ಸಮಗ್ರ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸದೆ, ರಹಸ್ಯವಾಗಿರಿಸಿದೆ.

ಈ ಲೇಖನ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ಮತದಾರರ ಪಟ್ಟಿಯನ್ನು ತೆಗೆದುಹಾಕಿದ್ದು ಮತ್ತು ಪಟ್ಟಿಯನ್ನು ರಹಸ್ಯವಾಗಿ ಇಟ್ಟಿರುವ ಬಗ್ಗೆ ಚುನಾವಣಾ ಆಯೋಗ ಪ್ರತಿಕ್ರಿಯೆಯನ್ನಾಗಲೀ, ಉತ್ತರವನ್ನಾಗಲೀ ನೀಡಿಲ್ಲ. ಆದರೆ, ‘ವೋಟ್ ಚೋರಿ’ ಪದ ಬಳಕೆಯ ಬಗ್ಗೆ ಮಾತ್ರವೇ ಪ್ರತಿಕ್ರಿಯಿಸಿದೆ.

“1951-1952ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ತತ್ವ ಅಸ್ತಿತ್ವದಲ್ಲಿದೆ. ಭಾರತದ ಎಲ್ಲ ಮತದಾರರನ್ನು ‘ಚೋರ್’ ಎಂದು ಬಣ್ಣಿಸುವ ಬದಲು ಯಾವುದೇ ವ್ಯಕ್ತಿ ಯಾವುದೇ ಚುನಾವಣೆಯಲ್ಲಿ ಎರಡು ಬಾರಿ ಮತ ಚಲಾಯಿಸಿರುವುದಕ್ಕೆ ಯಾರ ಬಳಿಯಾದರೂ ಯಾವುದೇ ಪುರಾವೆ ಇದ್ದರೆ ಅದನ್ನು ಅಫಿಡವಿಟ್‌ನೊಂದಿಗೆ ಸಲ್ಲಿಸಬೇಕು” ಎಂದು ಚುನಾವಣಾ ಆಯೋಗ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...