‘ಡಿಸೆಂಬರ್‌ವರೆಗೆ ಕಾಯಿರಿ’: ಮತ್ತೆ ಅಧಿಕಾರ ಬದಲಾವಣೆ ಚರ್ಚೆ ತೆಗೆದ ಡಿಕೆಶಿ ಬೆಂಬಲಿಗರು

Date:

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿ ಬದಲಾವಣೆಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ. ಇತ್ತೀಚೆಗೆ, ಇಬ್ಬರೂ ನಾಯಕರ ಬೆಂಬಲಿಗರ ಬಾಯಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬೀಗ ಹಾಕಿತ್ತು. ಆದಾಗ್ಯೂ, ಅಧಿಕಾರಿ ಬದಲಾವಣೆಯ ಬಗ್ಗೆ ಮತ್ತೆ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಮಾತನಾಡುತ್ತಿದ್ದಾರೆ. ‘ಡಿಸೆಂಬರ್‌ವರೆಗೆ ಕಾದು ನೋಡಿ’ ಎಂದು ಶಾಸಕ ಬಸವರಾಜು ಶಿವಗಂಗಾ ಹೇಳಿದ್ದಾರೆ.

ಸುದ್ದಿಗಾರರು ಕೇಳಿದ, ‘ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆಯೇ, ತಮಗೆ ಸಚಿವ ಸ್ಥಾನ ಸಿಗುವುದೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಬಸವರಾಜು, “ಈ ವರ್ಷದ ಅಂತ್ಯದ ವೇಳೆಗೆ ಬದಲಾವಣೆಗಳು ಸಂಭವಿಸುತ್ತವೆ” ಎಂದು ಹೇಳಿದ್ದಾರೆ.

“ನನ್ನ ಹಣೆಬರಹದಲ್ಲಿ ಏನು ಬರೆಯಲಾಗಿದೆ ಎಂಬುದರ ಬಗ್ಗೆ ತಿಳಿಯಲು ಡಿಸೆಂಬರ್‌ ನಂತರ ಮಾತನಾಡೋಣ. ನನ್ನ ಬಾಸ್ ಮುಖ್ಯಮಂತ್ರಿಯಾದರೆ, ನಾನು ಮಂತ್ರಿಯಾಗಬಹುದು. ನನ್ನ ಭವಿಷ್ಯದ ಬಗ್ಗೆ ನಾನು ಡಿಸೆಂಬರ್ ನಂತರ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಯುದ್ಧ | ಟ್ರಂಪ್ ತಿಕ್ಕಲುತನದಿಂದ ಜಾಗತಿಕ ಆರ್ಥಿಕ ಮಾರುಕಟ್ಟೆ ಕುಸಿತದ ಭೀತಿ

2023ರಲ್ಲಿ ಕಾಂಗ್ರೆಸ್‌ ಗೆದ್ದಾಗ, ಡಿ.ಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಆದರೆ, ಉಪಮುಖ್ಯಮಂತ್ರಿ ಹುದ್ದೆ ಪಡೆಯುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಮನವೊಲಿಸಿತ್ತು. ಆದಾಗ್ಯೂ, 50:50 ಅನುಪಾತದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದವಾಗಿದೆ ಎಂಬ ಚರ್ಚೆಗಳು ಆಗಿನಿಂದಲೂ ನಡೆಯುತ್ತಿವೆ. ಒಂದು ವೇಳೆ, ಅದು ನಿಜವಾಗಿದ್ದರೆ, 2.5 ವರ್ಷಗಳ ಬಳಿಕ, ಅಂದರೆ, ಈ ವರ್ಷದ ಡಿಸೆಂಬರ್‌ನಲ್ಲಿ ಅಧಿಕಾರ ಬದಲಾವಣೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ಹೀಗಾಗಿಯೇ, ಡಿ.ಕೆ ಶಿವಕುಮಾರ್ ಪಾಳಯದಲ್ಲಿರುವ ಬಸವರಾಜು ಸೇರಿದಂತೆ ಹಲವರು ಅಧಿಕಾರ ಬದಲಾವಣೆಯ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದಾರೆ. ಆದಾಗ್ಯೂ, ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಅವರ ಬೆಂಬಲಿಗರು ಹೇಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...