ವಕ್ಪ್‌ ವಿವಾದ | ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ: ಆರ್‌ ಅಶೋಕ್‌ ಆರೋಪ

Date:

ವಕ್ಫ್‌ ಮಂಡಳಿ ಬಡವರ ಭೂಮಿ ಕಬಳಿಸುತ್ತಿರುವುದರಿಂದ ಎಲ್ಲರೂ ಭೀತಿಗೊಳಗಾಗಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಇದರ ನೇತೃತ್ವ ವಹಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯನವರು ನೋಟಿಸ್‌ ವಾಪಸ್‌ ಪಡೆಯಲು ಸೂಚಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಮುಖ್ಯ ಕಾರ್ಯದರ್ಶಿ ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚಲು ಮುಖ್ಯಮಂತ್ರಿ ಸುಳ್ಳು ಹೇಳಿದ್ದಾರೆ” ಎಂದು ದೂರಿದರು.

“ಟಿಪ್ಪು ಸುಲ್ತಾನ್‌ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಈಗ ಕಾಂಗ್ರೆಸ್‌ ವಕ್ಫ್‌ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ. ಸರ್‌.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನೂ ವಕ್ಫ್‌ ಆಸ್ತಿ ಎಂದು ಉಲ್ಲೇಖಿಸಲಾಗಿದೆ. 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕಬಳಿಕೆ ಮಾಡಿದ ಭೂಮಿ ವಾಪಸ್‌ ಪಡೆಯಿರಿ ಎಂದು ಹೇಳಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ ಮಂಡಳಿಯ ಸದಸ್ಯರು ವಿಧಾನಸೌಧ ನಮ್ಮದು ಎಂದು ಕೂಡ ಹೇಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಸರ್ಕಾರವಿದ್ದಾಗ ಕೋಲಾರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗಿತ್ತು. ಈಗ ಅದರ ಮೇಲೆ ಮಸೀದಿ ಕಟ್ಟಿಸಿ ಕಾಂಪೌಂಡ್‌ ನಿರ್ಮಿಸಲಾಗಿದೆ. ಇಂತಹ ಅಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಕ್ಫ್‌ ವಿವಾದದಲ್ಲಿ ಜೆಪಿಸಿ | ಹಿಂದು ವಿರೋಧಿ, ರೈತ ವಿರೋಧಿ ನೀತಿಗೇಕೆ ಬಿಜೆಪಿ ಅಂಟಿಕೊಳ್ಳುತ್ತಿದೆ?

ಕೋವಿಡ್‌, ಕಾಂಗ್ರೆಸ್‌ಗೆ ತಿರುಗುಬಾಣ

“ಕಾಂಗ್ರೆಸ್‌ ಸರ್ಕಾರ ಎಲ್ಲಕ್ಕೂ ಎಸ್‌ಐಟಿ ರಚಿಸುತ್ತಿದೆ. ಸಿದ್ದರಾಮಯ್ಯನವರ ಹಗರಣದ ವಿರುದ್ಧ ಕೆಂಪಣ್ಣ ಆಯೋಗ ರಚಿಸಿದ್ದು, ಅದರ ವರದಿ ಬಂದೇ ಇಲ್ಲ. ಕೋವಿಡ್‌ ಸಮಯದಲ್ಲಿ ಬಿ.ಎಸ್‌.ಯಡಿಯೂರಪ್ಪನವರು ಅಧಿಕಾರಿಗಳು ಹೇಳಿದಂತೆ ಖರೀದಿ ಮಾಡಲು ಸೂಚಿಸಿದ್ದಾರೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈ ಪ್ರಕರಣ ಸರ್ಕಾರಕ್ಕೆ ತಿರುಗುಬಾಣವಾಗಲಿದೆ” ಎಂದು ಹೇಳಿದರು.

“ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾವು ಆಡಳಿತ ಪಕ್ಷದಲ್ಲಿದ್ದಾಗ ಸಮಾಧಾನ ಚಿತ್ತದಿಂದ ಎಲ್ಲವನ್ನೂ ನಿರ್ವಹಿಸುತ್ತಿದ್ದೆವು. ಆದರೆ ಈ ಸರ್ಕಾರ ಎಲ್ಲಕ್ಕೂ ಹಿಂದಿನವರೇ ಕಾರಣ” ಎಂದು ಆರೋಪ ಮಾಡುತ್ತಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...