ವಕ್ಫ್ ಮಸೂದೆ | ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್‌

Date:

ಸರ್ಕಾರವು ವಕ್ಫ್ ಮಸೂದೆ ತಿದ್ದುಪಡಿಗಳನ್ನು ಅಂಗೀಕಾರಕ್ಕೆ ಮುಂದಾಗುವ ಮುನ್ನ ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಮುಂದಿನ ಮೂರು ದಿನಗಳವರೆಗೆ ಸದನದಲ್ಲಿ ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕು ಎಂದು ಕಾಂಗ್ರೆಸ್ ತನ್ನ ಸಂಸದರಿಗೆ ತಿಳಿಸಿದೆ.

ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದಾದ ಬೆನ್ನಲ್ಲೇ ಕಾಂಗ್ರೆಸ್ ಮೂರು ದಿನಗಳ ವಿಪ್ ಅನ್ನು ಜಾರಿಗೊಳಿಸಿದೆ.

ಇದನ್ನು ಓದಿದ್ದೀರಾ? ವಕ್ಫ್‌ ತಿದ್ದುಪಡಿ ಮಸೂದೆಗೆ ನಾಯ್ಡು, ನಿತೀಶ್‌ ಬೆಂಬಲ; ಮುಸ್ಲಿಂ ಸಮುದಾಯ ಶಾಶ್ವತವಾಗಿ ದೂರ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕ್ಫ್ ಮಸೂದೆಯನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿರುವ ಸರ್ಕಾರ ಮತ್ತು ಇದನ್ನು ಸಂವಿಧಾನಬಾಹಿರ ಎಂದು ಖಂಡಿಸುತ್ತಿರುವ ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದ, ಚರ್ಚೆ ನಡೆಯುವ ಸಾಧ್ಯತೆಯಿದೆ.

ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ಎಲ್ಲಾ ಪ್ರಮುಖ ಪಕ್ಷಗಳ ನಾಯಕರನ್ನು ಒಳಗೊಂಡ ಲೋಕಸಭೆಯ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಎಂಟು ಗಂಟೆಗಳ ಚರ್ಚೆಗೆ ಒಪ್ಪಿಕೊಂಡಿದೆ ಎಂದು ಅಲ್ಪಸಂಖ್ಯಾತರು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಪರ ಸಂಸದರು ಅಧಿಕವಾಗಿರುವ ಕಾರಣ ಕೇಂದ್ರವೇ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಲೋಕಸಭೆಯಲ್ಲಿ 542 ಸದಸ್ಯರ ಪೈಕಿ 293 ಸಂಸದರು ಎನ್‌ಡಿಎ ಒಕ್ಕೂಟಕ್ಕೆ ಸೇರಿದವರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...