ಬಾಗಲಕೋಟೆ | ದೇವಸ್ಥಾನದ ಕಾರ್ಯಕ್ರಮದಲ್ಲಿ ‘ವಕ್ಫ್‌’ ವಿಚಾರ: ಶಾಸಕ ಯತ್ನಾಳ್‌ಗೆ ಸಾರ್ವಜನಿಕರಿಂದ ಛೀಮಾರಿ

Date:

ಮುಸ್ಲಿಮರ ವಿರುದ್ಧ ಸದಾ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ‘ವಕ್ಫ್‌’ ವಿಚಾರ ಪ್ರಸ್ತಾಪಿಸಿ, ಮುಖಭಂಗ ಅನುಭವಿಸಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯತ್ನಾಳ್ ಭಾಗವಹಿಸಿದ್ದರು. ತಮ್ಮ ಭಾಷಣದ ವೇಳೆ ‘ವಕ್ಫ್‌’ ವಿಚಾರ ಪ್ರಸ್ತಾಪಿಸಿದ್ದಾರೆ.

ಈ ವೇಳೆ ವೇದಿಕೆಯ ಬಳಿಯಲ್ಲಿದ್ದ ಊರಿನ ಹಿರಿಯರು ಹಾಗೂ ಸ್ಥಳೀಯರು, ‘ಇಲ್ಲಿ ರಾಜಕಾರಣ ಮಾಡಲು ಬರಬೇಡಿ’ ಎಂದು ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ಛೀಮಾರಿ ಹಾಕಿದ್ದಾರೆ. ಇದರಿಂದ ಸಾರ್ವಜನಿಕರ ಎದುರಲ್ಲೇ ಮುಖಭಂಗ ಅನುಭವಿಸಿದ ಯತ್ನಾಳ್, ಅರ್ಧದಲ್ಲಿಯೇ ಮಾತು ಮೊಟಕುಗೊಳಿಸಿ ವೇದಿಕೆಯಿಂದ ಇಳಿದು ಹೋಗಿದ್ದಾರೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಯಾವ ಕಾರ್ಯಕ್ರಮ ನೀವು ಏನು ಮಾತಾಡುತ್ತಿದ್ದೀರಿ. ದೇವಸ್ಥಾನ ನಿರ್ಮಾಣಕ್ಕೆ ಎಲ್ಲ ಸಮುದಾಯದವರು ದೇಣಿಗೆ ಕೊಟ್ಟಿದ್ದಾರೆ. ಮುಸ್ಲಿಮರು ಆರು ಲಕ್ಷ ರೂ.ದೇಣಿಗೆ ಕೊಟ್ಟಿದ್ದಾರೆ. ಇದು ರಾಜಕೀಯ ಮಾತಾನಾಡುವ ಸ್ಥಳ ಅಲ್ಲ’ ಎಂದು ಯತ್ನಾಳ್‌ ರನ್ನು ನೆರೆದಿದ್ದ ಜನರು ತರಾಟೆ ತೆಗೆದುಕೊಂಡರು. ಜನರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಯತ್ನಾಳ್‌ ವೇದಿಕೆಯಿಂದ ಇಳಿದು ಹೋಗಿದ್ದಾರೆ.

ಇದನ್ನು ಓದಿದ್ದೀರಾ? ಬಂಟ್ವಾಳ | ಯುವತಿಯನ್ನು ಭೇಟಿ ಮಾಡಲು ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ: ಆರು ಮಂದಿಯ ಬಂಧನ

ಮೊನ್ನೆಯಷ್ಟೇ ಬಸನಗೌಡ ಯತ್ನಾಳ್ ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ರೈತರ ಪರ ಎನ್ನುತ್ತಾ ಮುಸ್ಲಿಮರ ವಿರುದ್ಧ ದ್ವೇಷ ಹರಡಲು ಯತ್ನಿಸಿದ್ದರು. ಈ ಧರಣಿಯ ಸ್ಥಳಕ್ಕೆ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ರಚಿಸಿರುವ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಕೂಡ ಭೇಟಿ ನೀಡಿದ್ದರು. ವಕ್ಫ್‌ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದ ವಿಜಯಪುರ ಶಾಸಕ ಯತ್ನಾಳ್ ಈಗ ಸಾರ್ವಜನಿಕರಿಂದಲೇ ಛೀಮಾರಿ ಹಾಕಿಸಿಕೊಂಡಿರುವುದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...