ವಯನಾಡ್ ಉಪಚುನಾವಣೆ | ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯ ಇಂದು ನಿರ್ಧಾರ!

Date:

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಮತದಾನ ನಡೆಯುತ್ತಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದು, ಅವರ ರಾಜಕೀಯ ಭವಿಷ್ಯವನ್ನು ಕ್ಷೇತ್ರದ ಮತದಾರರು ಇಂದು ನಿರ್ಧರಿಸಲಿದ್ದಾರೆ.

ಚುನಾವಣಾ ಕಣದಲ್ಲಿ ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಅಭ್ಯರ್ಥಿಯಾಗಿದ್ದಾರೆ. ತಮ್ಮ ಸಹೋದರನನ್ನು ಗೆಲ್ಲಿಸಿದ್ದ ವಯನಾಡ್‌ ಜನರು ತಮ್ಮ ಕೈಬಿಡುವುದಿಲ್ಲ ಎಂಬ ವಿಶ್ವಾಸದಲ್ಲಿದ್ದಾರೆ. ವಯನಾಡ್‌ನಲ್ಲಿ ಗೆದ್ದು, ಸಂಸತ್ ಪ್ರವೇಶಿಸುವ ಉತ್ಸಾಹದಲ್ಲಿದ್ದಾರೆ.

ಕೇರಳದಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಮೈತ್ರಿಕೂಟ ಸಾಥ್ ಕೊಟ್ಟಿದೆ. ಎಡ ಪಕ್ಷಗಳ ಮೈತ್ರಿ ಎಲ್‌ಡಿಎಫ್‌ನಿಂದ ಸತ್ಯನ್ ಮೊಕೇರಿ ಮತ್ತು ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆಯಲ್ಲಿದ್ದು, ಪೈಪೋಟಿ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಳದ ಒಂದು ತಿಂಗಳಿನಿಂದ ಭಾರೀ ಪ್ರಚಾರ ನಡೆಸಿರುವ ಪ್ರಿಯಾಂಕಾ ಗಾಂಧಿ, ತಮ್ಮ ಮೊದಲ ಪ್ರಯತ್ನದ ಯಶಸ್ಸಿಗಾಗಿ ಕಾಯುತ್ತಿದ್ದಾರೆ. ಸದ್ಯ, ವಯನಾಡ್ ಕ್ಷೇತ್ರವು ಕಾಂಗ್ರೆಸ್‌ಗೆ ಭದ್ರಕೋಟೆಯಂತಿದ್ದು, ಗೆಲ್ಲುವ ವಿಶ್ವಾಸವಿದೆ. ಆದರೂ, ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಗಳ ಕಾರಣದಿಂದ ಯಾವುದನ್ನೂ ಸರಾಗವಾಗಿ ತೆಗೆದುಕೊಳ್ಳಲಾಗದು ಎಂಬ ಎಚ್ಚರಿಕೆಯೂ ಕಾಂಗ್ರೆಸ್‌ ನಾಯಕರಲ್ಲಿದೆ.

2019ರಲ್ಲಿ ಮೊದಲ ಬಾರಿಗೆ ರಾಹುಲ್ ಗಾಂಧಿ ವಯನಾಡಿನಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 2024ರಲ್ಲಿ ವಯನಾಡ್ ಮತ್ತು ರಾಯ್‌ ಬರೇಲಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್, ಎರಡೂ ಕ್ಷೇತ್ರಗಳಲ್ಲಿಯೂ ಗೆದ್ದಿದ್ದರು. ಬಳಿಕ, ವಯನಾಡ್‌ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...