ವಯನಾಡ್ ಭೂಕುಸಿತ | ತಂದೆ ಹತ್ಯೆಯಾದಾಗ ಅನುಭವಿಸಿದ್ದ ನೋವಿಗಿಂತ ಈಗ ಹೆಚ್ಚು ನೋವಾಗಿದೆ: ರಾಹುಲ್

Date:

ತಮ್ಮ ತಂದೆ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಹತ್ಯೆಯಾದಾಗ ಅನುಭವಿಸಿದ್ದಕ್ಕಿಂತ ವಯನಾಡ್ ಜನತೆಯ ನೋವು ತೀವ್ರವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಹೇಳಿದ್ದಾರೆ.

ಗುರುವಾರ ಭೂಕುಸಿತದಿಂದ ಬದುಕುಳಿದವರನ್ನು ಮತ್ತು ಭೂಕುಸಿತದ ಸ್ಥಳಗಳನ್ನು ಭೇಟಿ ಮಾಡಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, “ನನ್ನ ತಂದೆ ತೀರಿಕೊಂಡಾಗ ನನಗೆ ಹೇಗೆ ಅನಿಸಿತು ಎಂದು ನನಗೆ ಈಗ ಅನಿಸುತ್ತಿದೆ. ಇಲ್ಲಿಯ ಜನರು ಕೇವಲ ತಮ್ಮ ತಂದೆಯನ್ನು ಕಳೆದುಕೊಂಡಿಲ್ಲ, ಆದರೆ ಅವರ ಕುಟುಂಬದ ಅನೇಕ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಅವರ ನೋವು ನಾನು ಅನುಭವಿಸಿದ್ದಕ್ಕಿಂತ ತೀವ್ರವಾಗಿದೆ. ಅನೇಕ ಕುಟುಂಬದ ಸದಸ್ಯರನ್ನು ಕಳೆದುಕೊಂಡ ಜನರೊಂದಿಗೆ ಮಾತನಾಡಲು ತುಂಬಾ ಕಷ್ಟಕರವಾಗಿತ್ತು” ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ತಮ್ಮ ಸಹೋದರ ರಾಹುಲ್ ಅನುಭವಿಸಿದ ಭಾವನೆ ನನಗೂ ಇದೆ. ಹೆಚ್ಚಿನ ಸಂತ್ರಸ್ತರು ಮತ್ತೆ ಅದೇ ಪ್ರದೇಶದಲ್ಲಿ ವಾಸಿಸಲು ಬಯಸುವುದಿಲ್ಲ. ಆದ್ದರಿಂದ ಅವರನ್ನು ಇತರ ಸುರಕ್ಷಿತ ಸ್ಥಳಗಳಲ್ಲಿ ಸ್ಥಳಾಂತರಿಸಿ, ಪುನರ್ವಸತಿ ಒದಗಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ವಯನಾಡ್ ಭೂಕುಸಿತವು ರಾಷ್ಟ್ರೀಯ ವಿಪತ್ತು ಎಂದು ಅನಿಸಿದೆ. ಈ ವಿಷಯದ ಬಗ್ಗೆ ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತೇನೆ. ಇಡೀ ರಾಷ್ಟ್ರಕ್ಕೆ ಇದೊಂದು ಭೀಕರ ದುರಂತವಾಗಿದೆ. ಬದುಕುಳಿದವರಿಗೆ ಸೂಕ್ತ ಪುನರ್ವಸತಿ ಕಲ್ಪಿಸುವಂತೆ ನೋಡಿಕೊಳ್ಳಬೇಕು’’ ಎಂದು ರಾಹುಲ್ ಹೇಳಿದರು.

ಈ ಸಮಯದಲ್ಲಿ ನಾನು ರಾಜಕೀಯದ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ರಾಹುಲ್ ಹೇಳಿದರು. 2019ರಿಂದ ವಯನಾಡ್ ಕ್ಷೇತ್ರದ ಸಂಸದರಾಗಿದ್ದ ರಾಹುಲ್, 2024ರ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯಬರೇಲಿ – ಎರಡೂ ಕ್ಷೇತ್ರದಲ್ಲೂ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ನಂತರ, ರಾಯಬರೇಲಿ ಉಳಿಸಿಕೊಂಡು ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದರು. ವಯನಾಡ್ ಕ್ಷೇತ್ರದ ಲೋಕಸಭೆಯ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕಾ ಅವರನ್ನು ಕಾಂಗ್ರೆಸ್ ಈಗಾಗಲೇ ಘೋಷಿಸಿದೆ.

ವಯನಾಡ್‌ನ ಮುಂಡಕೈ ಹಾಗೂ ಚೂರಲ್ ಮಲದಲ್ಲಿ ಗುರುವಾರ ಭಾರೀ ಭೂಕುಸಿತ ಸಂಭವಿಸಿದ್ದು, 156ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅವರ ಪೈಕಿ ಕರ್ನಾಟಕದ 6 ಮಂದಿ ಕೂಡ ಸಾವಿಗೀಡಾಗಿದ್ದಾರೆ. ನೂರಾರು ಜನರು ಮನೆ, ಆಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಭೂಕುಸಿತದಿಂದ ತತ್ತರಿಸಿ ಹೋಗಿದ್ದಾರೆ. ಪರಿಹಾರ, ಪುನರ್ವಸತಿಗಾಗಿ ಎದುರು ನೋಡುತ್ತಿದ್ದಾರೆ.

ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆಯು ಕಷ್ಟಕರವಾಗಿದ್ದರೂ, ರಕ್ಷಣಾ ತಂಡಗಳು ಸಾಧ್ಯವಿರುವ ಎಲ್ಲ ಮಾರ್ಗಗಳ ಮೂಲಕ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಪರಿಹಾರ, ನೆರವು ಕಾರ್ಯಗಳಲ್ಲಿ ಹಲವಾರು ಮಂದಿ ಕೈಜೋಡಿಸಿದ್ದಾರೆ. ಭೂಕುಸಿತವಾದ ಬಳಿಕ, ಗುಂಡ್ಲುಪೇಟೆ-ವಯನಾಡು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...