ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ: ಮಾಜಿ ಸಿಎಂ ಬೊಮ್ಮಾಯಿ

Date:

ಮುಸ್ಲಿಮರಿಗೆ ನೀಡಿರುವ ಮೀಸಲಾತಿ ರದ್ದು ಮಾಡಿರುವ ವಿಚಾರದಲ್ಲಿ ನಾವು ತೆಗೆದುಕೊಂಡ ನಿರ್ಧಾರಕ್ಕೆ ಬದ್ದರಾಗಿದ್ದೇವೆ. ಈಗಿನ ಕಾಂಗ್ರೆಸ್ ಸರ್ಕಾರ ಅದನ್ನು ಏನು ಮಾಡುತ್ತದೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದು ಮಾಜಿ ಸಿಎಂ, ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಸ್ಲಿಮರ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳತೀದ್ದಾರೆ. ಅದರಲ್ಲೂ ಕೋರ್ಟ್ ಕಾರ್ಯಕಲಾಪದ ಬಗ್ಗೆ ಸುಳ್ಳು ಹೇಳುವುದು ಬಹಳ ತಪ್ಪು” ಎಂದರು.

“ನಾವು ಕೋರ್ಟ್ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಮಾಡುತ್ತೇವೆ. ಮುಂದುವರೆಸುತ್ತೇವೆ ಅಂತಾ ಹೇಳಿಲ್ಲ. ನಾವೇನು ಆಜ್ಞೆ ಮಾಡಿದ್ದೇವೆ ಅದನ್ನು ಸಿದ್ದರಾಮಯ್ಯ ಅವರ ಶಿಷ್ಯ ರವಿವರ್ಮ ಕುಮಾರ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದರು. ಇದರ ಹಿಂದೆ ಸಿದ್ದರಾಮಯ್ಯ ಇದ್ದಾರೆ. ಅದಾದ ಮೇಲೆ ಕೋರ್ಟ್ ಪ್ರೊಸೆಡಿಂಗ್ ನಲ್ಲಿ ಸಮಯ ಬೇಕು ಅಂತ ಸಮಯ ಕೇಳಿತು. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನಾವು ನಮ್ಮ ಕೇಸ್ ವಾದ ಮಾಡುತ್ತೇವೆ ಅಂತಾ ಹೇಳಿದ್ದೇವು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಕೇಸ್ ಹಿಂಪಡೆದಿಲ್ಲ. ಮುಂದಿನ ವಿಚಾರಣೆ ಆಗುವವರೆಗೂ ನಾವು ಜಾರಿ ಮಾಡುವುದಿಲ್ಲ ಅಂತಾ ಹೇಳಿದ್ದೇವು. ನಮ್ಮ ನಿಲುವು ಅದೆ ಇದೆ. ಇವತ್ತಿನ ಸರ್ಕಾರ ಅದನ್ನು ಮುಂದುವರೆಸತ್ತಾ ಅನ್ನುವ ಯಕ್ಷ ಪ್ರಶ್ನೆ ಇದೆ. ಅವತ್ತೆ ಕಾಂಗ್ರೆಸ್ ಅದನ್ನು ವಿರೋಧ ಮಾಡಿತ್ತು” ಎಂದರು.

“ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಇದನ್ನು ಸ್ಪಷ್ಟವಾಗಿ ಹೇಳಿದ್ದಾರೆ‌. ಅದಾಗ್ಯೂ ಕೂಡಾ ಸುಮಾರು 23, 24 ಮುಸ್ಲಿಂ ಸಮುದಾಯಗಳು 2ಎ ಮೀಸಲಾತಿ ಪಟ್ಟಿಯಲ್ಲಿವೆ” ಎಂದರು.

“ಆಂಧ್ರಪ್ರದೇಶದಲ್ಲಿ ಇದೇ ರೀತಿ ಆದಾಗ ಸುಪ್ರೀಂ ಕೋರ್ಟ್ ನಲ್ಲಿ ಪುರಸ್ಕಾರ ಸಿಕ್ಕಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರ ಮೈ ಮೇಲೆ ಬಂದಾಗ ಈ ತರಹ ವ್ಯಾಖ್ಯಾನ ಮಾಡುತ್ತಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...